Wednesday, 1 September 2021

ಎಂದೆಂದು ಎನಗೆ ನೀನೆ ಅಖಿಳದೊಳು ಎಂದೆಂದು ಎನಗೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಎಂದೆಂದು ಎನಗೆ ನೀನೆ ಅಖಿಳದೊಳು ಎಂದೆಂದು ಎನಗೆ ನೀನೆ ಅಂದಿಗಿಂದಿಗೆ ಎನ್ನ ತಂದೆ ತಾಯಿಯು ನೀನೆ ಬಂಧು ಬಳಗವು ನೀಯೆನಗೆ ಹರಿಯೆ ಪ


ಸುಖಸೌಖ್ಯದಲಿ ಸದಾನಂದ ಘನ ಬೀರುತಿಹ್ಯ ಭಗುತ ಜನರಿಗಹುದು ನೀ ಪ್ರೀಯ ಸಕಲದೇವಾದಿಗಳ ಕೈಯಲೊಂದಿಸಿಕೊಂಬ ಮಕುಟ ಮಣಿಯಹುದೊ ನೀ ಎನ್ನಯ್ಯ ಲೋಕಾಧಿಲೋಕಪಾಲನೆಂದು ಶ್ರುತಿಸ್ಮøತಿ ಅಖಿಳ ಭುವನದಲೆನ್ನ ಸಾಕಿ ಸಲಹುವ ಸ್ವಾಮಿ 1 

ಏಕೋದೇವನೆ ನೀನದ್ವಿತೀಯ ಶ್ರೇಯಧೇನುವಾಗಿ ಸಾರಸಗರವುತಿಹ್ಯ ಸುಖ ದಾಯಕಹುದಯ್ಯ ನೀ ಸಾಕ್ಷಾತ ದಯಕರುಣದಿಂದಭಯಕರ ನಿತ್ಯಸಂಗಪೂರ್ಣ ತೋಯಜಾಕ್ಷ ನೀ ಪೂರ್ಣಪರಮ ಭಕ್ತರ ಪ್ರಾಣ ನಾಯಕನೆ ನೀನೆ ಪ್ರಖ್ಯಾತ ಕ್ಷಯರಹಿತನೆಂದು ಜಯವೆನಿಸಿಕೊಳುತಿಹ್ಯ ದಯಭರಿತನಹುದುಯ್ಯ ಸದೋದಿತ 2 

ನೀನೆ ಗತಿಯೆಂದು ಧರೆಯೊಳು ಕೊಂಡಾಡುವ ನೆನಹುತಿಹ್ಯ ನÀಹುದುಯ್ಯ ಬಾಲಕನು ನಾ ನಿನ್ನ ಫನದೊಲವಿನಿಂದ ಪಾವನಗೈಸುತಲಿಹ್ಯ ದೀನ ದಯಾಳು ನೀನೆ ಎನ್ನ ಅನುದಿನದಲಾಧಾರಿ ಮುನಿಜನರ ಸಹಕಾರಿ ನೀನಹುದಯ್ಯ ಜಗಜ್ಜೀವನ ಮನೋಹರನ ಮಾಡುತಿಹ್ಯ ದಾಸ ಮಹಿಪತಿಸ್ವಾಮಿಭಾನುಕೋಟಿಯು ನೀನು ಪ್ರಸನ್ನ 3

***

No comments:

Post a Comment