Wednesday, 1 September 2021

ಜಯ ಜಯ ಕರುಣಾಕರ ಗುರುದೇವ ವಾಸುದೇವ ankita mahipati

ಜಯ ಜಯ ಕರುಣಾಕರ ಗುರುದೇವ ವಾಸುದೇವ ಪ   


ಮುನಿಜನ ಪಾಲಕ ದೀನ ದಯಾಳ ಅನಾಥ ಬಂಧು ಶರಣಾಗತ ವತ್ಸಲ ಸನಕಾದಿಗಳೊಂದಿತ ಸಿರಿಸುಖಲೋಲ ಅನುದಿನ ಅಣುರೇಣುಕ ನೀನೆ ಸುಕಾಲ 1 

ಪತಿತ ಪಾವನ ಪರಮ ಉದಾರ ಭಕ್ತವತ್ಸಲ ಮಾಮನೋಹರ ಅತಿಶಯಾನಂದ ಸುಜ್ಞಾನಸಾಗರ ಚತುರ್ದಶ ಭುವನಕೆ ನೀ ಸಹಕಾರ 2 

ದೇಶಿಕರಿಗೆ ದೇವ ನೀನೇ ನಿಧಾನ ವಿಶ್ವಪಾಲಕ ಸ್ವಾಮಿ ನೀ ಸುಗುಣ ಭಾಸ್ಕರ ಕೋಟಿ ತೇಜ ನೀನೇ ಪೂರ್ಣ ಲೇಸಾಗ್ಹೊರಿಯೊ ದಾಸ ಮಹಿಪತಿ ಪ್ರಾಣ3

****


No comments:

Post a Comment