Wednesday, 1 September 2021

ಕರುಣಾಕರನೀತ ಕರಿಭಯ ಹರಿದಾತ ಹರಿಪರಂದೈವೀತ ಗುರುನಾಥ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಕರುಣಾಕರನೀತ ಕರಿಭಯ ಹರಿದಾತ ಹರಿಪರಂದೈವೀತ ಗುರುನಾಥ ಪ 


ಮೂರುಗುಣರಹಿತ ಮೂರುಲೋಕ ವಂದಿತ ಮುರಹರನಹುದೀತ ಗುರುನಾಥ 1 

ಸುರಜನ ಪೂಜಿತ ಪರಮಾನಂದಭರಿತ ತಾರಕನಹುದೀತ ಗುರುನಾಥ 2 

ಪತಿತಪಾವನೀತ ಪಿತಾಮಹನ ಪಿತ ದಾತನಹುದೀತ ಗುರುನಾಥ 3 

ಅನುದಿನ ಸಾಕ್ಷಾತ ದೀನದಯಾಳುನೀತ ಗುರುನಾಥ 4 

ಭಕ್ತವತ್ಸಲನೀತ ಶಕ್ತಸದ್ಗುರುನಾಥ ಮುಕ್ತಿದಾಯಕನೀತ ಗುರುನಾಥ 5 

ಜನವನದೊಳಗೀತ ಮನೋಭಾವಪೂರಿತ ಆನಂದೋ ಬ್ರಹ್ಮನೀತ ಗುರುನಾಥ6 

ಗುಹ್ಯಕೆ ಗುಹ್ಯನೀತ ಬಾಹ್ಯಂತ್ರ ಸದೋದಿತ ಮಹಾಮಹಿಮನೀತ ಗುರುನಾಥ 7 

ಇಹಪರ ನಮಗೀತ ಮಹಿಪತಿ ಪ್ರಾಣನಾಥ ಸಹಾಕರನಹುದೀತ ಗುರುನಾಥ 8

****


No comments:

Post a Comment