Wednesday, 1 September 2021

ಬಾರಯ್ಯ ಗುರುದೇವರಾಯ ಶ್ರೀ ಹರಿಯೆ ನಮ್ಮಯ್ಯ ಗುರು ಭಕ್ತಜನ ಪ್ರಿಯ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಬಾರಯ್ಯ ಗುರುದೇವರಾಯ ಶ್ರೀ ಹರಿಯೆ ನಮ್ಮಯ್ಯ ಗುರು ಭಕ್ತಜನ ಪ್ರಿಯ  ಪ 


ನೀರೊಳು ಪೂಕ್ಕು ನಿಗಮನ ತಂದಿ ಬಾರಯ್ಯ ಧರಿಯ ಬೆನ್ನಿಲಿ ಪೊತ್ತು ನಿಂದಿ ನೀ ಬಾರಯ್ಯ ಧಾರುಣಿಯ ಗೆದ್ದು ಹಿರಣ್ಯಕನ ಕೊಂದಿ ಬಾರಯ್ಯ ಎಂದೆನಯ್ಯ ಗುರುತಂದೆಬಾರಯ್ಯ 1 

ಮೂರು ಪಾದವನಳಿದುಕೊಂಡಿ ನೀ ಬಾರಯ್ಯ ಶಿರಗಳನೆ ಚೆಂಡಾಡಿ ಸಿರಿ ತಂದಿ ಬಾರಯ್ಯ ಗಿರಿಯೆನೆತ್ತಿ ನಿಂದಿ ಬಾರಯ್ಯ ಶ್ರೀ ಹರಿ ಮುಕುಂದಯ್ಯ ಗೋವಿಂದ ಬಾರಯ್ಯ 2 

ಬರಿಯ ಬೆತ್ತಲೆ ಆಗಿ ವ್ರತವಳಿದಿ ಬಾರಯ್ಯ ಏರಿ ಕುದುರಿಯನೆ ರಾವುತನಾದಿ ಬಾರಯ್ಯ ಪರಮಭಕ್ತರನು ಹೊರಿಯಲಿ ಬಂದಿ ಬಾರಯ್ಯ ಪರಿಪರಿ ರೂಪವಾದಯ್ಯ ತರಳ ಮಹಿಪತಿ ಪ್ರಾಣದೊಡೆಯ ಬಾರಯ್ಯ 3

****


No comments:

Post a Comment