ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ಕಂಡೆವಯ್ಯಾ ಕಣ್ಣಾರೆ ನಾ ಪ
ಕಣ್ಣಾರೆ ಕಂಡೆ ಹರಿಯ ಎನ್ನ ಪ್ರಾಣಧೊರಿಯ ಧನ್ಯಗೈಸಿದ ಪರಿಯ ಏನೆಂದ್ಹೇಳಲಯ್ಯ 1
ಸ್ವಾನುಭವದ ಖೂನ ಜನಕ್ಹೇಳಲೇನು 2
ಆಡೇನಂದರ ಅಮಾತು ನಾಡಿಗೇನು ತಿಳದೀತು ಪಡೆದವಗೆ ದೋರಿತು ಬಿಡದ್ಹಾಂಗಾದೀತು 3
ಗುರುಕರುಣ ಕಟಾಕ್ಷ ಗುರುತಾಗ್ಯದ್ಯನ್ನಪೇಕ್ಷಾ ಇರುಳ್ಹಗಲೆ ದೋರುವದಧ್ಯಕ್ಷ 4
ಎನಗದೆ ಬ್ರಹ್ಮಾನಂದ ಭಾನುಕೋಟಿ ತೇಜನಿಂದ ದೀನಮಹಿಪತಿ ಬಂದ ಅನುಭವ ಆನಂದ 5
***
No comments:
Post a Comment