Wednesday, 1 September 2021

ತಪ್ಪು ನೋಡುವರೇನೋ ಕೃಪಾಸಿಂಧು ಶ್ರೀಗುರು ಒಪ್ಪಿಸಿಕೊಂಡರೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ತಪ್ಪು ನೋಡುವರೇನೋ ಕೃಪಾಸಿಂಧು ಶ್ರೀಗುರು ಒಪ್ಪಿಸಿಕೊಂಡರೆ ತಪ್ಪಾರಿಸುವರೆ ಪ  


ಒಡಲಹೊಕ್ಕವರವಗುಣವ ನೋಡುವರೇನೊ ಒಡಿಯನೆಂದವರ ತಾ ಕೈಯ್ಯ ಬಿಡುವರೆ ಮಡದಿ ಮಕ್ಕಳೆನಿಸಿ ಕಡೆಗಣ್ಣ ನೋಡುವರೆ ಒಡುಹುಟ್ಟಿದವರಿಗೆರಡ ಬಗೆವರೇನಯ್ಯ 1 

ಬಡವರ ಮಕ್ಕಳ ಮಡುವಿನೊಳು ಧುಮುಕಿಸಿ ಕುಡಗೋಲ ಕುಂಬಳ ಕೊಟ್ಟವರ ಕೈಯ್ಯ ಒಡನೆ ಹೋಳುವದುಚಿತವೇನಯ್ಯ 2 

ಬಡವನಾಧಾರಿ ಎಂದು ನಾ ನಿಮ್ಮ ಪೊಡವಿಯೊಳು ಶ್ರೀಪಾದ ದೃಢದಲಿ ನೋಡು ಕರುಣಾಲೆನ್ನ ನೀಡಿ ಅಭಯ ಹಸ್ತದಿ ಮೂಢ ಮಹಿಪತಿಗೆ ಕಡೆಗಾಣಿಸುವುದೈಯ್ಯ 3

***


No comments:

Post a Comment