Wednesday, 1 September 2021

ಸಜ್ಜನರ ಸಂಗ ಸ್ವಹಿತಕೆ ಸುಖಸನ್ಮತ ಅಮೃತ ankita mahipati

 ಸಜ್ಜನರ ಸಂಗ ಸ್ವಹಿತಕೆ ಸುಖಸನ್ಮತ ಅಮೃತ ಪ  


ಗಂಗಿಯೊಳು ಮುಳಗಿ ತಾ ಮಿಂದರ್ಹೋಗದು ಪಾಪ ಹಾಂಗೆಂದಿಗಲ್ಲ ಸಜ್ಜನರ ಪ್ರತಾಪ ಕಂಗಳಲಿ ಕಂಡರ್ಹೋಗುವುದು ತಾಪಾಪ ಸಂಗ ಸುಖದಲಿ ಸರ್ವಪುಣ್ಯ ಮೋಪ 1 
ಚಂದ್ರ ಶೀತಳದೊಳು ನಿಂದರ್ಹೋಗುದು ತಾಪ ಎಂದೆಂದಿಗ್ಹಾಂಗಲ್ಲ ಸಜ್ಜನ ಸಮೀಪ ಒಂದೆ ಮನದಲಿ ನೆನೆದರ್ಹಿಂಗಿ ಹೋಗುದು ತಾಪ ವಂದಿಸೀದವಾ ಮೂರು ಲೋಕ ತಾಪಾ 2 
ಕಲ್ಪತರುವಿಗೆ ಕಲ್ಪಿಸಿದರ್ಹೋಗುದು ದೈನ್ಯ ಒಲಮಿಂದ್ಹಾಗಲ್ಲ ಸದ್ಗುರು ಸುಪುಣ್ಯ ಕಲ್ಪಿಸದೆ ಕುಡುವದಿದು ನೋಡಿ ಘನ ತಾರ್ಕಣ್ಯ ಸಲಹುತೀಹ್ಯ ಮಹಿಪತಿಗಿದೆವೆ ಧನ್ಯ 3
***

No comments:

Post a Comment