ಕಾಖಂಡಕಿ ಶ್ರೀ ಮಹಿಪತಿರಾಯರು
ಭಾಸ್ಕರಗುರುದಯ ಭಾಸುತದೆ ವಿಜಯ ಪ
ಕಂಗಳಿಗೆದುರಿಟ್ಟಾನಂದ ಮಂಗಳಕರದೋರುತಲ್ಯದೆ ಚೆಂದ ಸಂಗ ತೋರಿತು ನಿಜವಂದ ಹಿಂಗಿಸಿ ಭವಬಂಧ 1
ಮನಸಿಗೆ ತೋರಿತು ಊರ್ಜಿತ ನೆನೆವಿಗೆ ಕೈಗೊಟ್ಟಿತು ಆಯತ ಜನವನದೊಳುಗುದಿತಾ ಘನವೆ ಸಾಕ್ಷಾತ 2
ಸೋಹ್ಯದೋರಿ ಸಮರಸ ಸಾಹ್ಯಮಾಡಿದ ಸರ್ವೇಶಮಹಿಪತಿಗಿದೆ ಸಂತೋಷ ಇಹಪರ ಉಲ್ಲಾಸ 3
***
No comments:
Post a Comment