..
ಸಾಲದೆ ನಿನ್ನದೊಂದು ದಿವ್ಯನಾಮ - ಅ-ಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ಪ
ರಣದೊಳಗೆ ಅಂಗಾಂಗ ಖಂಡತುಂಡಾಗಿ ಪ್ರತಿರಣವನುತ್ತರಿಸಿ ಮರಣವ ತಾಳಿರೆಪ್ರಣವ ಗೋಚರ ನೀನು ಗೋಚರಿಸಿ ಬಂದೆನ್ನಹೆಣಕೆ ಪ್ರಾಣವ ಪ್ರಯೋಗಿಸಿದಂತರಾತ್ಮ1
ಕುಂತದಿಂ ತೂಂತುಗೊಂಡೆನ್ನ ಬೆನ್ನಿಂದಿಳಿವಸಂತತ ನೆತ್ತರನೊರಸಿ ಬಿಸುಟೆತಿಂತ್ರಿಣಿಯ ಮರದಡಿಯೆ ಹಾವು ಕಡಿದೊರಗಿರಲುಮಂತ್ರಿಸಿ ಮನೆಗೆ ಕಳುಹಿದೆ ಗರುಡಗಮನ 2
ಕ್ಷೀಣ ದೇಹವ ಬಿಡುವೆನೆಂದು ಪಾಡಂಬಟ್ಟುತ್ರಾಣದಲಿ ಗರಳ ತೈಲವ ಸೇವಿಸೆವೇಣುನಾದದಲಿ ಹಣೆಯನೇವರಿಸಿ ಪಂಚಪ್ರಾಣ ಪ್ರತಿಷ್ಠೆಯ ಮಾಡಿದೆ ಮಹಾತ್ಮ 3
ತಮ್ಮ ಹವಣನರಿಯದೆ ಕೊಬ್ಬಿದ ಪಿಶಾಚಿಗಳುಎಮ್ಮ ಮನೆಗೊಂದೆ ಸಮ ಕಲ್ಲಲಿಟ್ಟುಹೆಮ್ಮಕ್ಕಳ ಬಾಧಿಸುವುದನು ಕಂಡುಬೊಮ್ಮಜಟ್ಟಿಗರ ಶಿರವರಿದೆ ನರಹರಿಯೆ 4
ಓದಿ ಹೇಳಿದರೊಂದು ಕಥೆಯಾಗುತಿದೆ ಮಹಾಂಬೋಧಿಶಯನನೆ ವೇದಶಾಸ್ತ್ರ ಮುಖದಿಬಾಧಿಸುವ ದುರಿತಾಗ್ನಿಗಂಬು ಶ್ರೀ ಕಾಗಿನೆಲೆಯಾದಿಕೇಶವನ ನಾಮ ಸಂಕೀರ್ತನ 5
***
No comments:
Post a Comment