Wednesday, 1 September 2021

ವಿಠಲನ ನಾಮ ಮರೆತು ಪೋದೆನಲ್ಲ ಲಟಪಟ ನಾ ಸಟೆಯಾಡುವೆನಲ್ಲ ankita neleyadikeshava

 .

ವಿಠಲನ ನಾಮ ಮರೆತು ಪೋದೆನಲ್ಲ

ಲಟಪಟ ನಾ ಸಟೆಯಾಡುವೆನಲ್ಲ ಪ


ಶೇಷಗಿರಿಯ ಮೇಲೆ ಸವುತೆಯ ಬಿತ್ತಿದೇವಗಿರಿಯ ಮೇಲೆ ಅವತಾರವಿಕ್ಕಿಹಾಳೂರಿನೊಳಗೊಬ್ಬ ಕುಂಬಾರ ಸತ್ತಗೋಕರ್ಣದೊಳಗೊಬ್ಬ ಪರದೇಶಿ ಅತ್ತ 1


ಆ ಸಮಯದಿ ಮೂರು ರಾಯರ ಕಂಡೆಕುಪ್ಪುಸ ತೊಟ್ಟ ಕೋಳಿಯ ಕಂಡೆಬೆಳ್ಳಕ್ಕಿ ಬೆರಣಿಯ ಮಾಳ್ಪುದ ಕಂಡೆನರೆಸೂಳೆ ಗೆಯ್ವುದ ಕಣ್ಣಾರೆ ಕಂಡೆ 2


ನುಸಿಯೊಂದು ರೊಟ್ಟಿಯ ಸುಡುವುದ ಕಂಡೆಆಡೊಂದು ಮದ್ದಳೆ ಬಡಿವುದ ಕಂಡೆಕಪ್ಪೆ ತತ್ಥೈ ಎಂದು ಕುಣಿವುದ ಕಂಡೆಬಾಡದಾದಿಕೇಶವನ ಕಣ್ಣಾರೆ ಕಂಡೆ3

***


No comments:

Post a Comment