..
ಮಾವನ ಮನೆಯೊಳಗೆ ಇರಬಹುದೆ ಕೋವಿದರು ಪ
ಹಾವು ಹಿಡಿಯಲು ಬಹುದು ಹರಣ ನೀಡಲು ಬಹುದುಬೇವ ಕಿಚ್ಚನು ಹಿಡಿದು ನುಂಗಬಹುದುಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತಸಾವುದೇ ಲೇಸು ಅಭಿಮಾನಿಗಳಿಗೆ1
ಪರರ ಸೇರಲು ಬಹುದು ಪತಿತರಲ್ಲಿರಬಹುದುಕೊರಳ ಘಾತಕಂಗೆ ಶಿರ ಒಪ್ಪಿಸಬಹುದುತರುಣಿಯಳ ತೌರು ಮನೆಯಲಿ ಇರುವುದಕಿಂತತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು 2
ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದುಹೇವವನಿಕ್ಕಿ ಚೂರ್ಣವ ಮಾಡಲುಆವಾಗ ನೋಡಿದರು ಎನಗೆ ಹಿತರಿಲ್ಲೆಂದುಮಾವ ಹೊರಗಾಡುವನು ಚಿಕ್ಕ ನುಡಿಗಳನು 3
ಬಂದೊಂದು ತಿಂಗಳೊಳು ಬಹುಮಾನ ನಡತೆಗಳುಬಂದೆರಡು ತಿಂಗಳೊಳಗೆ ಹಿತವಾದವುಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವುಸಂದೇಹವೇಕೆ ಸಂಸಾರಿಗಳಿಗೆ4
ಈ ಪರಿಯಲುಂಬಂಥ ಅಳಿಯ ಭೋಜನಕಿಂತಗೋಪಾಳ ಲೇಸು ಅಭಿಮಾನಿಗಳಿಗೆಶ್ರೀಪತಿ ನೆಲೆಯಾದಿಕೇಶವನ ಚರಣ ಸ-ಮೀಪದಲಿ ವಾಸಿಪುದೆ ವಾಸಿ ಮನವೆ 5
* ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
***
No comments:
Post a Comment