Wednesday, 8 December 2021

ಹೇಗಿದ್ದು ಹೇಗಾದೆಯೊ ಆತ್ಮಯೋಗೀಶನಾನಂದಪುರದಲಿರುವುದ ankita neleyadikeshava HEGIDDU HEGAADEYO ATMAYOGEESHANAANANDAPURADALIRUVUDA



ಹೇಗಿದ್ದು ಹೇಗಾದೆಯೊ ಆತ್ಮಯೋಗೀಶನಾನಂದಪುರದಲಿರುವುದ ಬಿಟ್ಟು ಪ


ಬಸಿರ ಹಳ್ಳಿಗೆ ಬಂದು ಮಾಸನೂರಲಿ ನಿಂದುಕುಸುಕಾಡಿ ನುಡಿದು ನೆಲಬಟ್ಟೆವಿಡಿದುಕಿಸುಕದರಿವೆಯ ಪೊದ್ದು ಮಲಮೂತ್ರದಲಿ ಬಿದ್ದುವಸುಧೆಯಲಿ ದಿನಗಳೆದೆಯಲ್ಲ ಆತ್ಮ 1


ಎಳಗೆರೆಯಲಿ ಆಡಿ ಯೌವನದೂರಿಗೆ ಬಂದುಥಳಥಳಿಪ ಹಸ್ತಾದ್ರಿ ನೆಳಲ ಸೇರಿಅಳಲು ಸುತ ಬೆಳೆದು ದಾರಿದ್ರ್ಯ ಪೇಟೆಗೆ ಬಂದುಹಳೆಯ ಬೀಡಿಗೆ ಪಯಣವೇ ಆತ್ಮ 2


ಗನ್ನಗತಕದ ಮಾತು ಇನ್ನು ನಿನಗೇತಕೋಮುನ್ನ ಮಾಡಿದ ಕರ್ಮಭರದೊಡಲಿದೆಉನ್ನತದ ಕಾಗಿನೆಲೆಯಾದಿಕೇಶವ ಸುಪ್ರ-ಸನ್ನ ಮೂರುತಿಯ ಭಜಿಸೆಲೊ ಆತ್ಮ 3

***


No comments:

Post a Comment