Tuesday, 5 October 2021

ನೊಂದೆ ನಾ ಹರಿಯೆನ್ನದೆ ನೊಂದೆ ನಾ ಸತ್ತು ankita neleyadikeshava NONDE NAA HARI YENNADE NONDE NAA SATTU



ನೊಂದೆ ನಾ ಹರಿಯೆನ್ನದೆ ಪ


ನೊಂದೆ ನಾ ಸತ್ತು ಹುಟ್ಟುವ ಕೋಟಲೆಗಳಿಂದನೊಂದೆ ನಾ ಪಂಚೇಂದ್ರಿಯಗಳ ಬಾಧೆಗಳಿಂದನೊಂದೆ ನಾ ವೈರಿ ಷಡ್ವರ್ಗದಾಟಗಳಿಂದ ನೊಂದೆ ನಾ ಹರಿಯೆನ್ನದೆ ಅ 


ಒಂದು ಕ್ಷಣ ದುರ್ಗಂಧ ವಾಯು ಬರೆ ಹೇಸುವರುತಂದೆಯುದರದಿ ಮೂರು ಮಾಸ ತಾಯುದರದಲಿಸಂದೇಹವಿಲ್ಲ ನವಮಾಸ ಮಲ ಮೂತ್ರದೊಳುಒಂದಾಗಿ ನಿಂದು ಕುದಿಕುದಿದು ಹುಟ್ಟಿಬಂದೆ ಎಂಬತ್ತು ನಾಲುಕು ಲಕ್ಷ ಯೋನಿಯೊಳುನೊಂದೆ ಮುನ್ನೂರ ಅರವತ್ತು ಬೇನೆಗಳಿಂದಒಂದು ಕ್ಷಣವೂ ಯಮನ ಬಾಧೆ ತಾಳಲಾರೆನುಹಿಂದೆಗೆಯದಿರು ಇಂಬಿತ್ತು ಕಾಯೊ ಮುರಾರಿ 1


ಎಲುವುಗಳ ಗಳ ಮಾಡಿ ಬಲು ನರಂಗಳ ಬಿಗಿದುಚೆಲುವ ತೊಗಲಂ ಪೊದಿಸಿ ಮಜ್ಜೆ ಮಾಂಸವ ತುಂಬಿಹೊಲೆ ಗೂಡಿನೊಳು ಪೊಗಿಸಿ ತಲೆ ಹುಳಕ ನಾಯಂತೆಅಲೆದು ಮನೆಮನೆಯೆದುರು ಉಚ್ಚಿಷ್ಟವನು ತಿಂದುಕಳವು ಹಾದರ ಪಂಚಪಾತಕಂಗಳ ಮಾಡಿನೆಲೆಯಿಲ್ಲದಧಿಕತರ ನರಕದೊಳಗಾಳ್ದೆನೈಒಲಿದು ಬಂದು ರಕ್ಷಿಸು ನಾಗವೈರಿ ವಾಹನನೆನಳಿನ ಲೋಚನನೆ ನೀ ಎನ್ನ ಕೈ ಬಿಡದೆ 2


ಹುಟ್ಟುವಾಗಲೆ ಜಾತಕರ್ಮ ಷೋಡಶವೆಂಬಕಟ್ಟಳೆಯ ದಿವಸದಲಿ ನಂಟರಿಷ್ಟರು ಕೂಡಿಕಟ್ಟಿ ಮುಂಜಿಯ, ಹರುಷದಲಿ ಮದುವೆ ಮಾಡಿ ಉಂ-ಡುಟ್ಟು ಹಾಡಿ ಹರಸಿದರು ನೂರ್ಕಾಲ ಬದುಕೆಂದುಬಿಟ್ಟು ಪ್ರಾಣಂ ಪೋಗೆ ಪೆಣನೆಂದು ಮೂಲೆಯೊಳುಕಟ್ಟಿ ಕುಳ್ಳಿರಿಸಿ ಹೊಟ್ಟೆಯ ಹೊಯ್ದುಕೊಂಡಳುತಸುಟ್ಟು ಸುಡುಗಾಡಿನಲಿ ಪಿಂಡಗಳನಿಕ್ಕಿ ಬಲುಕಟ್ಟಳೆಯ ಕಾಣಿಸಿದರಯ್ಯ ಹರಿಯೆ 3


ಹಲವು ಜನುಮದಿ ತಾಯಿ ಎನಗಿತ್ತ ಮೊಲೆಹಾಲುನಲಿನಲಿದು ಉಂಬಾಗ ನೆಲಕೆ ಬಿದ್ದುದ ಕೂಡಿಅಳೆದು ನೋಡಿದರೆ ಕ್ಷೀರಾಂಬುಧಿಗೆ ಎರಡು ಮಡಿಹಲವಾರು ಸಲ ಅತ್ತ ಅಶ್ರುಜಲವನು ಕೂಡಿಅಳೆದು ನೋಡಿದರೆ ಲವಣಾರ್ಣವಕೆ ಮೂರು ಮಡಿಎಲುವುಗಳ ಕೂಡಿದರೆ ಮೇರುವಿಗೆ ನಾಲ್ಕು ಮಡಿಸುಲಿದು ಚರ್ಮವ ಹಾಸಿದರೆ ಧರೆಗೆ ಐದು ಮಡಿನೆಲೆ ಯಾವುದೀ ದೇಹಕೆ ನರಹರಿಯೆ4


ತಂದೆತಾಯಿಗಳಾರು ಇದ್ದ ಊರಾವುದುಹೊಂದಿದ್ದ ಮನೆಯೆಲ್ಲಿ ಇದ್ದ ಸತಿ ಸುತರಾರುಹಿಂದಿದ್ದ ಕುಲಗೋತ್ರ ನಾಮಂಗಳೆನಗೆಷ್ಟುಬಂದಂಥ ಸುಖದುಃಖವೆಷ್ಟುಅಂದು ಕೊಂದವರಾರು ಇಂದು ಕಾಯ್ವರದಾರುದಂದುಗವನಿದನೆಲ್ಲ ನೀಬಲ್ಲೆ ನಾನರಿಯೆತಂದೆ ನೆಲೆಯಾದಿಕೇಶವನೆ ನಿನ್ನಯ ಪಾದದ್ವಂದ್ವವನು ಎಂದಿಗೂ ಬಿಡೆನು ಬಿಡೆನೊ 5

***


No comments:

Post a Comment