Thursday 5 August 2021

ಹಿತಮತಿಯ ಪಾಲಿಸೊ ಗತಿಯ ಕಲ್ಪಿಸಿ ಸಿರಿಪತಿಯ ಪಾದದಿ ankita prananatha vittala

 ..

kruti by bagepalli shesha dasaru ಬಾಗೇಪಲ್ಲಿ ಶೇಷದಾಸರು

ಗಣೇಶ

ಹಿತಮತಿಯ ಪಾಲಿಸೊ ಪ


ಗತಿಯ ಕಲ್ಪಿಸಿ ಸಿರಿಪತಿಯ ಪಾದದಿ ಅ.ಪ


ಗಜವದನನೆ ಎನ್ನ ನಿಜಭಕುತಿಯೊಳ್ನಿನ್ನ

ಭಜನೆ ಮಾಡುವಂಥ ನಿಜವ ಪಾಲಿಸಿ 1


ಕರುಣಾಕರ ತವ ಚರಣಾಶ್ರಿತರಘ

ಹರಣ ಮಾಡಿ ನಿನ್ನ ಸ್ಮರಣೆಯ ಕೊಟ್ಟು 2


ದೀನನಾಗಿ ನಾ ನಿನ್ನ ಸನ್ನಿಧಾನಕೆ ಬಂದೆ

ಜ್ಞಾನವಿತ್ತು ಕಾಯೋ ಈಗ ಪ್ರಾಣನಾಥ ವಿಠಲನಲ್ಲಿ 3

***


No comments:

Post a Comment