..
kruti by ವಿಶ್ವೇಂದ್ರತೀರ್ಥರು vishwendra teertharu sode mutt
ಭೂತನಾಥ ಪಾಲಿಸೆನ್ನ ನಾರಾಯಣ
ಭೂತನಾಥನೆ ಪಾಲಿಸೆನ್ನ ಪ
ಕರ್ಣವಿಕರ್ಣಾದಿಗಣಗಳಿಂದಲಿ ಕೂಡಿ
ಸ್ವರ್ಣದಿ ಭಾಸುರಾಂಗ ಶ್ರೀರಾಜರ
ಸ್ವರ್ಣದ ಪಾಲಕಿಯನ್ನು ಮುಂಭಾಗದಿ
ಭಕುತಿಯಿಂದಲಿ ಪೊತ್ತ ಶ್ರೀ ಭೂತರಾಜ 1
ಬದರಿಕಾಶ್ರಮದಿಂದ ನದಿಯ ತಾತನ ದಿವ್ಯ
ಸದನವ ಶ್ರೀಸೋದಾಕ್ಷೇತ್ರಕ್ಕೆ ತರಲು
ಬೆದರದೆ ವಿಘ್ನವ ತಂದ ದೈತ್ಯನ ರಥ
ಚಕ್ರದಿಂದಲಿ ಕೊಂದು ರಥವ ಬೇಗದಿ ತಂದೆ 2
ಧನಪನ ಕೋಶದೊಳಿಪ್ಪ ಮೌಳಿಯ ವೇಗ -
ದಿಂದಲಿ ನೀ ತಂದು ವಾದಿರಾಜರಿಗಿತ್ತೆ
ಅನುಮಾನವಿಲ್ಲದೆ ತಂದು ಶ್ರೀರಾಜೇಶ
ಹಯಮುಖನನ ಚರಾಗ್ರಣಿಯಾಗಿ ಮೆರೆದೆ 3
***
No comments:
Post a Comment