Thursday, 5 August 2021

ಕಾಯೋ ಪ್ರಾಣೇಶ ಕೀಶಕುಲೇಶ ವಾಯುಸುತನೆಂದು ಮೆರೆವ ಜೀವೇಶ ankita rajesha hayamukha

 ..

kruti by ವಿಶ್ವೇಂದ್ರತೀರ್ಥರು vishwendra teertharu sode mutt


ಕಾಯೋ ಪ್ರಾಣೇಶ ಕೀಶಕುಲೇಶ

ವಾಯುಸುತನೆಂದು ಮೆರೆವ ಜೀವೇಶ ಪ


ಅಂಜನಾದೇವಿಯೊಳ್ ಜನಿಸಿಕೊಂಡಿರುವಿ

ಅಂಜದೆ ಲಂಕೆಗೆ ಬೆಂಕಿ ಹಚ್ಚಿರುವಿ

ಸಂಜೀವನವ ತಂದು ಕಪಿಗಳನುಳಿಸಿದಿ

ಕಂಜಾಕ್ಷಿ ಸೀತೆಗುಂಗುರವ ತಂದಿತ್ತೆ 1


ಕುಂತಿದೇವಿಯ ಗರ್ಭದೊಳಗುದ್ಭವಿಸಿದಿ

ಪಾರ್ಥರೊಳ್ನೀನಗ್ರಗಣ್ಯನೆಂದೆನಿಸಿ

ಪಂಥದಿ ಮಗದಾಧಿಪತಿಯ ಸಂಹರಿಸಿ

ಕಾಂತೆಯ ತಲೆಯ ಕೂದಲನೆ ಕಟ್ಟಿಸಿದಿ2


ಪಾಜಕ ಕ್ಷೇತ್ರದೊಳ್ ನೀನವತರಿಸಿ

ರಾಜತಾಸನದಿ ಶ್ರೀಕೃಷ್ಣನನಿರಿಸಿ

ರಾಜೇಶ ಹಯಮುಖ ಕಿಂಕರನೆನಿಸೀ

ಮೂಜಗದಲಿ ಶ್ರೇಷ್ಠಗುರು ನೀನೆಂದೆನಿಸಿ 3

***


No comments:

Post a Comment