..
kruti by ವಿಶ್ವೇಂದ್ರತೀರ್ಥರು vishwendra teertharu sode mutt
ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ
ನಿನ್ನ ಭಕ್ತರು ನಿನ್ನ ತಿಳಿಯದೆ ಬಿಡರು ಪ
ಮೀನಾಗಿ ಜಲದೊಳು ತಿರುಗುವದ್ಯಾಕೊ
ಚಾರಣನೆಂದೆನಿಸಿ ಭಾರವ ಪೊತ್ತುದ್ಯಾಕೊ 1
ಹಂದ್ಯಾಗಿ ದಿತಿಜನ ಬಡಿದೆ ನೀನ್ಯಾತಕೋ
ಕಂದನ ಪೊರೆಯೆ ಕಂಬದಿ ತೋರಿದ್ಯಾಕೊ 2
ವಟುವಾಗಿ ಭೂಮಿಯ ಬೇಡಿದೆ ಏತಕೊ
ಹಟವು ರಾಯರ ಮೇಲೆ ನಿನಗ್ಯಾಕೆ ಬೇಕೋ 3
ಮಲತಾಯಿ ನುಡಿಗಾಗಿ ವನವಾಸ ನಿನಗ್ಯಾಕೊ
ಬಲದಿ ತಂದೆಯ ಬಂಧ ಬಿಡಿಸಿದ್ದು ಸಾಕೊ 4
ರಾಜೇಶ ಹಯಮುಖ ಬತ್ತಲೆ ನಿಂತೆ ಏಕೊ
ತೇಜಿಯನೇರ್ದು ತೋರುವ ಶೌರ್ಯ ಸಾಕೊ 5
***
No comments:
Post a Comment