..
kruti by ವಿಶ್ವೇಂದ್ರತೀರ್ಥರು vishwendra teertharu sode mutt
ಏಳಯ್ಯ ಮಹಾರಾಜ ಬೆಳಗಾಯಿತೇಳಯ್ಯ ರಂಗ ಬಾ ಪ
ಬಾಗಿಲಲಿ ಕೂಗುವರು ಸನಕಾದಿ ಮುನಿವರರು
ನಾಗಭೂಷಣನು ಕೈಮುಗಿದು ನಿಂತ |
ಜಾಗರವ ಮಾಡಿರ್ಪ ಸುರರೆಲ್ಲ ಬಂದಾಯ್ತು
ಯೋಗಿಗಳು ಪೊಗಳುವರು ನಿನ್ನಂಘ್ರಿಯ 1
ಲಂಕೆಯನು ಬಿಟ್ಟು ವಿಭೀಷಣನು ನಿಂತಿರ್ದ
ಗಂಗೆಯನು ಬಿಟ್ಟೇಳು ಜಗದೀಶನೆ |
ತಂಗಿಯನು ಬೇಡುವರೆ ಭಾವ ಪಾರ್ಥನು ಬಂದ
ಮಂಗಳದ ನುಡಿ ನಿನಗೆ ಕೇಳಲಿಲ್ಲವೊ ಹರಿಯೆ 2
ಪುಟ್ಟಾದ ಮುನಿ ಬಂದನಿಷ್ಟ ಭೀಮನು ಬಂದ
ಥಟ್ಟನೆ ಏಳು ಯಾದವರಿಗರಸ |
ಸೃಷ್ಟಿಗೊಡೆಯನೆ ಕೇಳು ಭೂಸುರನು ರುಕ್ಮಿಣಿಯ
ಪುಟ್ಟ ವಾಲೆಯ ತಂದ ನೀ ನೋಡು ನೋಡು 3
ಕೋಪಿಗಳರಸಾದಿ ದುರ್ವಾಸ ಮುನಿ ಬಂದ |
ಇಂಪಾಗಿ ಪಾಡುತಿಹ ಸುರಮುನಿಯು ಬಂದ |
ಕೋಪದೊಳೊದೆದ ಮುನಿ ಬಂದ ಬೇಗೇಳು
ಪುಷ್ಪಶರ ಮಗ ಬಂದ ಬೇಗೇಳು ರಂಗ 4
ಸಿರಿದೇವಿ ನಿನ್ನಂಘ್ರಿಗಳನೊತ್ತ ಬಿಡಳೇನೊ |
ಮಾರುತಿಯ ಜಪವಿನ್ನು ಮುಗಿಯಲಿಲ್ಲೊ |
ಕರುಣದಿಂದಲಿ ಕಾಯೋ ರಾಜೇಶ ಹಯಮುಖನೆ
ನರರೆಲ್ಲ ನಗುವಂತೆ ಮಾಡದಿರೊ ರಂಗ 5
***
No comments:
Post a Comment