Friday, 6 August 2021

ಯಂತ್ರೋದ್ಧಾರಕ ಪ್ರಾಣರಾಯ ಎನ್ನ ಚಿಂತೆ ಹರಿಸೋ ankita ramavallabha vittala

 ..

Kruti by ಸರಸಾಬಾಯಿ Sarasabai 


ಯಂತ್ರೋದ್ಧಾರಕ ಪ್ರಾಣರಾಯ ಎನ್ನ ಚಿಂತೆ ಹರಿಸೋ ಪ.


ಅಂತರಂಗದಿ ಹರಿಯ ಧ್ಯಾನವ ಮಾಡಿಸೋ ಅ.ಪ.


ನಿನ್ನ ನೋಡಿ ಧನ್ಯಳಾದೆನೊ ಹೊನ್ನು ಹನುಮನೆ

ಎನ್ನ ಪಾಪ ಹರಿಸಿ ಕಾಯೊ ಘನ್ನ ಹನುಮನೆ 1


ಒಂದು ಅರಿಯದ ಮಂದಮತಿಯಳ ಬಂದು ಕಾಯೋ

ಬಂಧನವ ಬಿಡಿಸಿ ಕಾಯೋ ಸುಂದರಾಂಗನೆ 2


ತುಂಗಾತೀರದಿ ನಿಂತಿರುವಿ ಮಂಗಳಾಂಗನೆ

ಮಂಗಳ ರಾಮನ ಧ್ಯಾನವ ಮಾಡಿಸು ಎನಗೆ 3


ಹಂಪಿಯಲಿ ನಿಂತಿರುವಿ ಸೊಂಪಿನಿಂದಲಿ

ಸಂಪಿಗೆ ನೆರಳಲಿ ನೋಡಿದಿ ರಾಮರ ಧ್ಯಾನ ಮಾಡುತ 4


ರಾಮ ದೂತನೆ ಎನ್ನ ಮೊರೆಯ ಲಾಲಿಸಿ

ರಮಾವಲ್ಲಭವಿಠಲನ ಪಾದ ಬೇಗ ತೋರಿಸೊ 5

***


No comments:

Post a Comment