Sunday, 1 August 2021

ಚನ್ನಕೇಶವರಾಯ ಚೆಲುವ ಚೆನ್ನಿಗರಾಯಾ ನಿನ್ನ ಕಾಣದೇ ನಿಲ್ಲಲಾರೆ ಬೇಲೂರ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru

 ಕ್ಷೇತ್ರ ವರ್ಣನೆ ಬೇಲೂರು


ಚನ್ನಕೇಶವರಾಯ ಚೆಲುವ ಚೆನ್ನಿಗರಾಯಾ

ನಿನ್ನ ಕಾಣದೇ ನಿಲ್ಲಲಾರೆ ಬೇಲೂರ ಪ


ಧ್ವಜ ವಜ್ರ ಪದುಮ ಪತಾಕಾಂಕುಶಗಳು

ನಿಜಸತಿ ಲಕುಮಿದೇವಿಯರಾ

ಭುಜ ಕುಚ ಕುಂಕುಮಾಂಕಿತ ಧರಾಂಕಿತ

ಭಜಕರ ಭಾಗ್ಯೋದಯ ಪಾದಯುಗಳದಾ 1


ಸುರ ವೈರಿಗಳೆದೆ ಥಲ್ಲಣವೆನಿಸುವಾ

ಬಿರುದಿನ ಖಡ್ಡೆಯಪ್ಪ ಚರಣಂಗಳಾ

ಗರುಡನ ಹೆಗಲೇರಿ ಉದರದಿ ವಿರಿಂಚಿಯು

ಉದುಭವಿಸಿದ ವರನಾಭಿಯ ಚೆಲುವಿನಾ 2


ಪೊಂಬಟ್ಟೆಯಿಂದೆಸೆವ ಪೀತಾಂಬರ

ಚೆಂಬೊನ್ನದ ಕಾಂಚಿಯದಾಮದಾ

ಅಂಬುಜ ಕೌಮೋದಕಿ ಸುದರುಶನ

ಕಂಬುವ ಧರಿಸಿಹ ಚತುರುಭುಜಂಗಳಾ 3


ಶ್ರೀಯಾಲಿಂಗಿಸಿ ಸುಖವ ಕಾಮಿನಿಯರ

ಶ್ರೀಯೋಗವ ತೋರಿಸೆನಗೊಮ್ಮೆ

ಹಾಯೆಂದು ಬಿಗಿದಪ್ಪಿ ನಂಬಿಸಿ ಚುಂಬಿಸಿ

ಬಾಯ ತಂಬುಲವಿತ್ತು ಬಂದೆನ್ನ ನೆರೆಯಾ 4


ಕರೆವೆನ್ನ ಮನದಲ್ಲಿ ಕರೆವ ನಾಲಿಗೆಯಲ್ಲಿ

ಕರೆವೆನ್ನ ಕಣ್ಣುಸನ್ನೆಯಲೀ

ಕರೆವೆ ನೆರೆವೆ ನಿನ್ನ ಚರಣಕೆರಗುವೆ ನಾ

ವರವೈಕುಂಠಕೇಶವ ಬೇಲೂರ 5

***


No comments:

Post a Comment