Sunday, 1 August 2021

ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ankita vaikunta vittala

 ..

kruti by ಬೇಲೂರು ವೈಕುಂಠ ದಾಸರು belur vaikunta dasaru


ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ

ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ


ಮಂದರಧರನೇ ಬೇಲೂರ ಚೆನ್ನಿಗರಾಯ

ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ


ಕುಕ್ಷಿಯೊಳೀರೇಳು ಲೋಕವನು ತಾಳ್ದನೇ

ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ

ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು

ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1


ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ

ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ

ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ

¨Àಕ್ತವತ್ಸಲನು ನೀನೇ ಸ್ವಾಮಿ 2


ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ

ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು

ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ

[ಉರಿಸಿ]ಗೆಲಿದ ದೇವರದೇವಾ ಸ್ವಾಮಿ3


ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು

ಸಂದೇಹವಿಲ್ಲದಂದದಲಿ ಪಾಲಿಸಿ ನರನಾ

ಮುಂದೆ ಸಾರಥಿಯಾಗಿ ರಥವ ನಡಸಿದ ಗೋ

ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4


ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು

ಭೂಸ್ವರ್ಗವೆನಿಪ ವೇಲಾಪುರವಾಸಾ

ಕೇಶವ ಶ್ರೀವೈಕುಂಠ ಚೆನ್ನಿಗರಾಯಾ

ಶೇಷಶಯನನೇ ಕರುಣಿಸೈ ಸ್ವಾಮೀ 5

***


No comments:

Post a Comment