Friday, 6 August 2021

ಇಂದಿರೆ ಚಂದಿರವದನೆ ಮಂದಗಮನೆ ಕಂದರ್ಪ ಕೋಟಿ ಲಾವಣ್ಯೆ ankita vijayaramachandra vittala

    ..

Kruti by ವಿಜಯರಾಮಚಂದ್ರ ವಿಠಲ ದಾಸರು mysore kattemane 


ಇಂದಿರೆ ಚಂದಿರವದನೆ ಮಂದಗಮನೆ

ಕಂದರ್ಪ ಕೋಟಿ ಲಾವಣ್ಯೆ ಪ


ಮಂದನಾಗಿ ಭವಸಿಂಧುವಿಲಿ ಪೊಂದಿದೆ

ಬಂದು ನೀ ಕರಪಿಡಿದು ಮುಂದಕೆ ಕರೆಯೆ ಅ.ಪ.


ನಾಗವೇಣಿಯೆ ಸುರಶ್ರೇಣಿ ಅಗಣಿತಗುಣಮಣಿಯ

ಹೊಗಳುವ ಮತಿ ನೀಡೆ ಕಲ್ಯಾಣಿ

ಹಗಲಿರುಳು ನಡೆಯುವ ಬಗೆ ಬಗೆ ಕ್ರಿಯೆಗಳು

ನಗಧರನೆ ಮಾಳ್ಪಾನೆಂಬ ಮಿಗೆ ಜ್ಞಾನ ಪಾಲಿಸೆ 1


ಸರಸಿಜೋದ್ಭವ ಮಾತೆ ವಿಖ್ಯಾತೆ

ಸುರ ನಿಕರ ಸನ್ನುತೆ ಕಂಕಣಾಭರಣ ಭೂಷಿತೆ

ಕರೆ ಕರೆಗೊಳಿಸುವ ಅಹಂ ಮಮತೆ ಶರಧಿಯು

ತೆರೆಯಂತೆ ಬರುವುದು ಮರೆಸಿ ನೀ ಪೊರೆಯೆ 2


ಹರಿಗುಣ ಮಣಿಯೆಣಿಸುವ ಧೀರೆ

ಪರಿಪರಿ ಅಲಂಕಾರೆ ಸ್ಮರಿಸದವರಿಗೆ ದೂರೆ

ಅರಿದೂರ ವಿಜಯ ರಾಮಚಂದಿರವಿಠಲನ

ನಿರುತ ಧೇನಿಸುವಂತೆ ಮರೆಯದೆ ಮಾಡೆ ತಾಯೆ 3

***


No comments:

Post a Comment