Wednesday, 1 September 2021

ಜಿಪುಣರೈ ನೀವೆಂದು ಹೇಳಿದುದು ಸುಳ್ಳಲ್ಲ ankita gadugina veeranarayana purandara dasa stutih

 ..

kruti by ವೀರನಾರಾಯಣ Veeranarayana 

ಪುರಂದರದಾಸರು


ಜಿಪುಣರೈ ನೀವೆಂದು ಹೇಳಿದುದು ಸುಳ್ಳಲ್ಲ ಪ


ನಿಪುಣಮತಿ ಪುರಂದರ ದಾಸಮಲ್ಲ ಅ.ಪ.


ಘನತರದ ವೈರಾಗ್ಯ ತಳೆದು ದ್ವಿಜರಿಗೆಲ್ಲಧನಕನಕ ಸಂಪತ್ತು ದಾನ ಮಾಡಿದರೆಲ್ಲವನಜನಾಭನ ಸ್ತುತಿಗೆ ಶಬ್ದ ಸಂಪತ್ತೆಲ್ಲಒಸೆದು ನೀವೇ ಬಳಸಿ ನನಗೇನು ಕೊಡಲಿಲ್ಲ 1


ಖಂಜೂತನದ ಕಥೆಯನು ಹೇಳಲಾಸಲ್ಲಕಂಜನಾಭನ ಮಹಿಮೆ ಬಣ್ಣಿಸುವ ನೆವದಲ್ಲಿರಂಜನೆಯ ಶಬ್ದಗಳ ಸವಿದುಂಡೆಯಲ್ಲಿಎಂಜಲವನುಳಿದೆನಗೆ ಕಿಂಚಿತ್ತು ಬಿಡಲಿಲ್ಲ 2


ಕೃಪೆಮಾಡಿ ಕ್ಷಮಿಸುವುದು ವಿಪುಲ ಭಕ್ತಿಗಳಿಂದಜಪತಪದಿ ಕನ್ನಡದ ನಿಮ್ಮ ಭಾರತಮಲ್ಲ ಕೃಪಣವತ್ಸಲ ಗದುಗು ವೀರನಾರಾಯಣನ ಸಫಿಲ ಜ್ಞಾನವ ಗಳಿಸಿ ನಮಗೇನು ಕೊಡಲಿಲ್ಲ 3

***


No comments:

Post a Comment