..
kruti by ವೀರನಾರಾಯಣ Veeranarayana
ರಘುಪತಿಯೆ ನಿನ್ನನ್ನೆ ಪೊಗಳುವ ಪದಗಳನುಸೊಗಸಾಗಿ ರಚಿಪಂತೆ ಬಗೆಯನ್ನು ನೀಡೋ ಪ
ಪರರ ಪೊಗಳಿಕೆ ಬೇಡ ಪರರ ತೆಗಳಿಕೆ ಬೇಡಪರಮಪಾವನ ನಿನ್ನ ಮಹಿಮೆಯನು ಬಣ್ಣಿಸುವಸರಸ ನುಡಿಗಳು ಬಾಯೆ ಬರುವಂತೆ ಮಾಡೊ 1
ಒಂದು ಲಕ್ಷದ ನಾಮದೊಂದು ಮಣಿಮಾಡಿಕುಂದದಿಹ ಭಕ್ತಿಗುಣದಿಂದ ಪೋಣಿಸಿ ಪದ್ಯದಂಥ ಹಾರವ ಮಾಡಿ ನಿನ್ನೆಡೆಗೆ ಅರ್ಪಿಸಲುಮಂದ ಬುದ್ಧಿಯ ನನಗೆ ಶಕ್ತಿಯನೀಡೋ 2
ರಾಗ ನಿನಗೆಯೆ ತಾಳ ನಿನಗೆಯೆ ಗೊತ್ತುರಾಗ ತಾಳಗಳ ಮೇಳ ನನಗೇನು ಗೊತ್ತುರಾಗತಾಳಗಳಲ್ಲಿ ಹಗುರಾಗಿ ಹಾಡಲಿಕೆತೂಗಿ ಶಬ್ದಗಳಿಡಲು ಸನ್ಮತಿಯ ನೀಡೋ 3
ಸುರವರನೆ ಬೇಕಯ್ಯ ನಿನ್ನ ಪ್ರೇರಣೆ ಇದಕೆವರಕವಿಯು ಸು ಕುಮಾರವ್ಯಾಸನಿಗೆ ವರವಿತ್ತುಉರುತರದ ಕನ್ನಡದಿ ಭಾರತವ ಬರೆಯಿಸಿದತೆರದಿ ಗದುಗಿನ ವೀರನಾರಾಯಣನೆ ಸಲಹೊ 4
***
No comments:
Post a Comment