Wednesday 1 September 2021

ಮುದ್ದು ತಾರೋ ರಂಗಾ ಮುದ್ದು ತಾರೋ ಕೃಷ್ಣಾ ಸಿದ್ಧ ವೇದಾ ankita gurumahipati

ಕಾಖಂಡಕಿ ಶ್ರೀ ಕೃಷ್ಣದಾಸರು

ಮುದ್ದು ತಾರೋ ರಂಗಾ ಮುದ್ದು ತಾರೋ ಕೃಷ್ಣಾ ಸಿದ್ಧ ವೇದಾ ಗಮಾ ಭೇದ್ಯ ಮೋಹನ್ನಾ ಪ 


ಕಾಣಲಿಕ್ಕೆ ಹಸಿವೆ ತೃಷೆಗಳೇ ಮರೆವದು ಏಣಾಂಕ ಬಿಂಬ ಮೊದಾ ಬಾಯಿಂದಾ 1 

ಕರ್ಪುರವಾ ಕರಡಿಗಿಯಂತೆ ಹೊಳೆವುತಾ ವಪ್ಪುತಿಹ ಚಲ್ವ ಪುಟ್ಟ ಬಾಯಿಂದಾ2 

ಅಮ್ಮ ತಾರಮ್ಮ ನಾನುಂಡೆನೆಂದು ಕೈಯ ಬೀಸಿ ಝಮ್ಮನೇ ತೊಡಲು ನುಡಿ ಬಾಯಿಂದಾ 3 

ತಪ್ಪ ಹೆಜ್ಜೆಯನಿಟ್ಟು ಘಲಘಲನೆ ನಡೆವುತ ಧಪ್ಪನೆ ಬೀಳುತ್ತಾ ಬಿರಿವ ಬಾಯಿಂದಾ4 

ಹಣೆಯ ಅರಳೆಲೆ ಮಾಗಾಯಿಗಳಲ್ಲಾ ಆಡಿಸುತಾ ಕುಣಿದು ಬೆಣ್ಣೆಯ ಬೇಡುವ ಬಾಯಿಂದಾ5 

ಕೋರಳಿಗೆ ಅಂಟಹಾಕಿ ಕೈಗಳಿಂದಾ ಬಿಗಿದಪ್ಪಿ ಗುರು ಮಹಿಪತಿ ನಂದನ ಜೀವನ್ನಾ 6

*** 

No comments:

Post a Comment