Wednesday, 1 September 2021

ಹೆಮ್ಮೆಯಾ ಬಿಡು ಬಿಡು ಮನುಜಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಹೆಮ್ಮೆಯಾ ಬಿಡು ಬಿಡು ಮನುಜಾ ಪ 


ಬೊಮ್ಮ ದೂರ್ವಾಸಾದಿಗಳೆಲ್ಲಾ | ಸುಮ್ಮನೆ ತಲೆವಾಗಿ ಹೋದರೆಂಬುದ ಕೇಳಿ ಅ.ಪ ಕಡಲೊಳು ಕುಳಿತಿಹ ಬಕದಾಲ್ಭ್ಯನೊಳು ಗರ್ವ | ನುಡಿಯಲಿ ತಾ ವಾಯು ವಶದಿಂದಲಿ | ತಡಿಯದೆ ಬಹುಮುಖ ಕಮಲಾಸನ ಕಂಡು | ಒಡನೆ ಲಜ್ಜಿತ ಬ್ರಹ್ಮನಾದ ನೆಂಬುದು ಕೇಳಿ 1 

ತುಚ್ಛ ಮಾಡಿದ ಇಂದ್ರನೆಂಬ ಗರ್ವದಿ ಬಂದು | ಮತ್ಸರಿಸಲು ಅಂಬೃಷಿಯೊಡನೆ | ಅಚ್ಯುತನಾಯುಧ ಬೆನ್ನಟ್ಟಿ ಬರಲಾಗ | ಹುಚ್ಚಿಟ್ಟು ದೂರ್ವಾಸ ಹೋದನೆಂಬುದ ಕೇಳಿ 2 

ಮೇರು ಗಿರಿಯ ಸಮವಾಗಿ ಸೂರ್ಯನ ರಥಾ | ದಾರಿ ಕಟ್ಟುವೆನೆಂದು ಬೆಳೆಯುತಲಿ | ಧೀರಗಸ್ತ್ಯನ ನುಡಿ ಕೇಳಿ ವಿಂದ್ಯಾದ್ರಿ | ಧಾರುಣಿಯೊಳಗೇ ನಾದನೆಂಬುದ ಕೇಳಿ 3 

ಯಕ್ಷರಾಕ್ಷಸದೇವ ದ್ವಿಜರೊಳೆಮಗಸಮ | ಕಕ್ಷದಿ ನಿಲುವ ರರೆನುತಾ | ಭಿಕ್ಷುಕ ಯೋಗಿಯನುತಾ ಶಿವನೆಣಿಸದೆ | ದಕ್ಷ ಮನ್ಮಥರೇನಾದರೆಂಬುದ ಕೇಳಿ 4 

ನಹುಷಾದಿ ರಾಯರು ಮೂಢ ಪಂಡಿತರೆಲ್ಲಾ | ಬಹುತರು ನಮ್ರವೃತ್ತಿಯ ತ್ಯಜಿಸಿ | ಮಹಿಪತಿಸುತ ಪ್ರಭು ವಲುಮೆಗೆ ದೂರಾಗಿ | ಅಹಂಕಾರ ಬಲಿಯೊಳು ಕೆಟ್ಟರೆಂಬುದ ಕೇಳಿ 5

***


No comments:

Post a Comment