ಕಾಖಂಡಕಿ ಶ್ರೀ ಕೃಷ್ಣದಾಸರು
ವಾಸುದೇವನ್ನಾ ಪಾದವ ನಂಬಬಾರದೇ | ಈಶನೊಲಮಿಂದಾ ಸದ್ಗತಿ ಸುಖವು ದೊರದೇ ಪ
ವನಜಭವಾದಿಗಳು ದೋರುವೆನಾ ಮುಕುತಿಯು ಪಾಯಾ | ಯನುತ ಬಂದರೆಯುನೊಡದಿರು ಅವರ ಕಡೆಯಾ 1
ಜಠರ ಬಾಗಿಲವಾ ಕಾವಾಶ್ವಾನನ ಪರಿಯಂತೆ | ನಿಷ್ಠೆಯೊಂದನೆ ಬಿಟ್ಟು ತಿರುಗಬ್ಯಾಡ ಕಂಡಂತೆ2
ಇಂದಿಗೆ ನಾಳಿಗೇ ಹ್ಯಾಂಗೆಂದು ಚಿಂತಿಸದಿರು | ಛಂದದಿ ಗೀತೆಯಲಿ ಸಾರಿದ ವಾಕ್ಯಾ ಮರೆಯದಿರು 3
ಶಿಲೆಯೊಳಗಿರುತಿಹಾ ಕಪ್ಪಿಗಾಹಾರ ನೀಡುವರಾರೋ | ತಿಳಿದು ನೀನೀಗ ಹಲವ ಹಂಬಲವ ಹಿಡಿಯದಿರು 4
ಎರಡು ದಿನದಿದು ಸಂಸಾರವೆಂಬುದು ನೋಡಿ | ಅರಿತು ಇದರೋಳಗ ಸಾರ್ಥಕ ಸಾಧನವ ಮಾಡಿ 5
ಒಂದು ಭಾವದಲಿ ತ್ವರಿತದಿ ಹೊಕ್ಕರ ಶರಣವನು | ತಂದೆ ಮಹಿಪತಿ ಸುತ ಸನ್ಮಾರ್ಗ ಕೂಡಿಸುತಿಹನು 6
ಏನೆಂದರಿಯದಾ ಕಂದಗೆ ಉದ್ದರಿಸಿದ ನೋಡೀ | ತಂದೆ ಮಹಿಪತಿಯು ದಾರಿಯ ದೋರಿದ ದಯಮಾಡಿ 7
***
No comments:
Post a Comment