Wednesday, 1 September 2021

ನೆನೆಯೋ ನೀ ಎನ್ನ ಮನವೇ ಅನುಪಮ್ಯ ಶ್ರೀ ಮುಕುಂದನಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನೆನೆಯೋ ನೀ ಎನ್ನ ಮನವೇ| ಅನುಪಮ್ಯ ಶ್ರೀ ಮುಕುಂದನಾ| ಚಕೋರ ಸುನಕ್ಷತ್ರೇಶ ಗೋಪಾಲನಾ| ಶ್ರೀಲೊಲನಾ ನಂದಬಾಲನಾ ಪ 


ವರಭಕ್ತ ಧೃವಗ ಸ್ಥಿರಪದ ವಿತ್ತನಾ| ಧರಣಿಯ ಭಯಹರ ಪುರುಷೋತ್ತಮನಾ| ಉರಗ ತುಳಿದವನಾ| ಉರಗಶಯನುರಗಾ ಭರಣನ ಸಖನಾ| ಸುನಖನ ಅಬ್ಬ ಮುಖನಾ 1 

ದುರಿತ ನಿವಾರಕನಾ| ಕರುಣಾದೀ ಅಹಲ್ಯಯ ನುದ್ಧರಿಸಿದನಾ ಸರಸಿಜ ಸಮಪದ ಸರಸಿಜನಾಭನಾ| ಸರಿಸಿಜ ಪಾಣಿಯ ಸರಸಿಜ ನೇತ್ರನಾ 2 

ಸುಚರಿತ್ರನಾ ಮುನಿಸ್ತೋತ್ರನಾ| ಗುರುವರ ಮಹಿಪತಿ ನಂದನ ಜೀವನಾ| ಗಿರಿವರಧಾರನಾ ಕಂಸಾಸುರ ಮರ್ಧನಾ| ಶರಧಿ ನಿವಾಸನಾ| ಹರಿಶತ ಕಿರಣ ಹರಿಸುತ ಪ್ರೀಯನಾ| ಸ್ಮರಸೈಯ್ಯನಾ ಕೃಷ್ಣರೇಯನಾ3

***


No comments:

Post a Comment