Wednesday, 1 September 2021

ನೀನೇ ಸಕಲವೆನ್ನ ಸ್ವಾಮಿ ಶ್ರೀ ಹರಿಯೆ ದೀನ ದಯಾಳು ನೀನೆವೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ನೀನೆ ಸಕಲವೆನ್ನ ಸ್ವಾಮಿ ಶ್ರೀ ಹರಿಯೆ ದೀನ ದಯಾಳು ನೀನೆವೆ ನಿಜಧೊರಿಯೆ ಪ 


ತಂದೆ ತಾಯಿಯು ನೀನೆ ಬಂಧುಬಳಗ ನೀನೆ ಹೊಂದಿಕಿ ಹೊಲಬು ನೀ ಎನ್ನ ನೀನೆ ಎಂದೆಂದು ಸಲಹುವಾನಂದ ಮೂರುತಿ ನೀನೆ ಕುಂದ ನೋಡದಿಹ್ಯ ಮಂದರಧರ ನೀನೆ 1 

ಕುಲದೈವವು ನೀನೆ ಮೂಲಪುರಷ ನೀನೆ ಒಲಿವ ಭಾಗ್ಯದ ಫಲಶ್ರುತಿಯು ನೀನೆ ಸಾಲವಳಿಯು ನೀನೆ ಹಲವು ಭೂಷಣ ನೀನೆ ಕುಲಕೋಟಿ ಬಳಗಾದ ಭಕ್ತವತ್ಸಲ ನೀನೆ 2 

ಧನದ್ರವ್ಯಾರ್ಜಿತ ನೀನೆ ಘನಸೌಖ್ಯಾಕರ ನೀನೆ ಅನುದಿನಲಿಗನುಕೂಲ ನೀನೆ ದೀನ ಮಹಿಪತಿಸ್ವಾಮಿ ಭಾನುಕೋಟಿ ತೇಜನೆ ಮನೋಹರ ಮಾಡುವ ಮಹಾಮಹಿಮ ನೀನೆ 3

****


No comments:

Post a Comment