Thursday, 2 September 2021

ನೋಡಿದರೆ ತನ್ನೊಳಗದೆ ಗೂಢವಾಗದೆ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ನೋಡಿದರೆ ತನ್ನೊಳಗದೆ ಗೂಢವಾಗದೆ ಪ 


ಸೋಹ್ಯ ತಿಳಿಯಗೊಡದೆ ಮಾಯ ಮರಿ ಆಗ್ಯದೆ ಕಾಯದೊಳಗೆ ತಾನಾದೆ ಗುಹ್ಯವಾಗ್ಯದೆ 1 

ಅಡಿ ಮೇಲು ತಿಳಿಯದೆ ಬಿಡದೆ ಸೂಸುತಲ್ಯದೆ ಹಿಡಿದೇನೆಂದರೆ ಬಾರದು ಇಡದು ತುಂಬ್ಯದೆ 2 

ತೋರಿಕೆ ತೋರಿಸದೆ ಪರಿಪೂರ್ಣ ತಾನಾಗ್ಯದೆ ಮೂರುಗುಣಕೆ ಮೀರ್ಯದೆ ಬ್ಯಾರೆ ತಾನದೆ 3 

ಕರುಣಿಸಿ ನೋಡುತದೆ ಕರೆದರೋ ಎನುತದೆ ಬ್ಯಾರೆ ನಿರಾಶೆವಾಗ್ಹಾದೆ ಹೊರೆಯುತಲ್ಯದೆ 4 

ನೀಲವರ್ಣದೊಳದೆ ಥಳಥಳಗುಡುತದೆ ಮ್ಯಾಲೆ ಮಂದಿರದೊಳದೆ ಲೋಲ್ಯಾಡುತದೆ 5 

ಗುರುತ ಕಂಡವಗದೆ ಗುರುಸ್ವರೂಪವಾಗ್ಯದೆ ಗುರು ಕೃಪೆ ಆದವಂಗದೆ ಸಾರಿ ಚಲ್ಯದೆ 6 

ದಾಸ ಮಹಿಪತಿಯೊಳದೆ ವಾಸವಾಗ್ಯದೆ 7

****

 

No comments:

Post a Comment