ಕಾಖಂಡಕಿ ಶ್ರೀ ಮಹಿಪತಿರಾಯರು
ಉದಯವಾಯಿತು ಹೃದಯ ಕಮಲದೊಳಗೆ P
ಗುರುಕರುಣಾನಂದಬೋಧ ಅರುಣೋದಯವಾಯಿತು ಸ್ಮರಣಿಗರವು ದೊರೆಯಿತು ಹರಿಯ ಚರಣದ 1
ಸಮ್ಯಜ್ಞಾನದ ಪ್ರಭೆ ಸಮ್ಯವಾಗಿದೋರಿತು ತಾಮಸನಿದ್ರೆ ಹರಿಯಿತು ತಿಮಿರಾಂಧದ 2
ಥಳಥಳಿಸುವ ರವಿಕೋಟಿ ಬೆಳಗಾಯಿತು ಹೊಳೆಯುತ ತೇಜೋನ್ಮಯವು ಒಳಗೊರಗೆಲ್ಲ 3
ಒದಗಿ ಬಂತೆದುರಿಟ್ಟು ಮೊದಲೆ ಪುಣ್ಯದ ಘಲ ಉದಯವಾಯಿತದೃಷ್ಟವು ಸದೃಷ್ಟವಾಗಿ 4
ಸದ್ಗತಿ ಸುಖವಿದು ಸದೋದಿತವಾಯಿತು ಸಾಧಿಸಿ ಮಹಿಪತಿಗೆ ಸದ್ಗರು ಕೃಪೆಯು 5
***
No comments:
Post a Comment