Wednesday, 1 September 2021

ಕಾಣಿ ಖೂನ ಕಂಡ ಮ್ಯಾಲ ಖಂಡ ಮಾಡಿಕೊಂಬುದೆ ಸುಜ್ಞಾನ ankita mahipati

 ಕಾಣಿ ಖೂನ ಕಂಡ ಮ್ಯಾಲ ಖಂಡ ಮಾಡಿಕೊಂಬುದೆ ಸುಜ್ಞಾನ ಪ  


ಕಾಣುವನು ಕಾಣಿಯೇನಾಗಿದೊ ಪ್ರಾಣಿ ಕಾಣದೆ ಹೋದರನೇಕ ಜನ್ಮ ನಾನಾಯೋನಿ 1 

ಕಾಣುವನ ಸ್ಥಾನ ಕಾಣದಿಹುದೇನ ಜ್ಞಾನಗುರುವಿನ ಕೈಯ ಕೇಳಿಕೊ ನೀ ಖೂನ 2 

ಕಂಡು ಕಾಂಬುವನ ಅಖಂಡ ಮಾಡೋಧ್ಯಾನ ಪಿಂಡ ಬ್ರಹ್ಮಾಂಡಕ್ಕೆ ಇದೆ ವಸ್ತು ನಿಜಘನ 3 

ಕಾಣುವನ ಕೂಡಿ ಸ್ವಾನುಭವ ಮಾಡಿ ದೀನ ಮಹಿಪತಿಗಿದೆ ಘನ ಸುಖನೋಡಿ4

***


No comments:

Post a Comment