Wednesday, 1 September 2021

ಜಯ ಜಯಾನಂದ ಕಂದ ಜಯ ನಿರ್ಗುಣ ನಿದ್ರ್ವಂದ್ವ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಜಯ ಜಯಾನಂದ ಕಂದ ಜಯ ನಿರ್ಗುಣ ನಿದ್ರ್ವಂದ್ವ ಪ 


ಒಳಗೆ ಹೊರಗೆ ನೀನೆ ಪೂರ್ಣ ಬೆಳಗಿ ಬೆಳಗಾಗಿಹುದ ಥಳಥಳಿಸುವ ಗುಣ ಹೊಳವು ಸುಳವು ಪಾವನ 1 

ದೇವಾಧಿದೇವ ದೇವ ಭುವನತ್ರಯಕೆ ಜೀವ ಭಾವಿಕರಿಗೆ ಕಾವ ಭವನಾಶಗೈಸುವ 2 

ಅಜ ಸುರವರ ಮುನೀಂದ್ರ ನಿಜಘನಸುಖಮುದ್ರ ರಾಜ ರಾಜರಾಜೇಂದ್ರ 3 

ಮುನಿಜನರ ಪ್ರಾಣಪದಕ ಅನುಭವದ ನಿಜಸುಖ ಖೂನ ವಿಶ್ವತೋಮುಖ ಅಣುರೇಣು ವ್ಯಾಪಕ 4 

ಮೂರು ಗುಣಕೆ ರಹಿತ ಗುರುಮೂರ್ತಿ ಸಾಕ್ಷಾತ ತರಳ ಮಹಿಪತಿದಾತ ಹೊರಿಯೊ ನೀ ಸದೋದಿತ 5

****


No comments:

Post a Comment