..
ಕಾಯೊ ಎನ್ನನು ದೇವ ಕಡೆ ಹಾಯಿಸೊ ಕಡಲೊಡೆಯ ಪ
ಕಾಯಯ್ಯ ನೀ ಎನ್ನ ಕಮಲದಳಾಕ್ಷ ಅ
ಒಂದು ಕಾಯಲಿ ನಾನು ಒಲಿದು ದಂಡಿಗೆಯಾದೆಎರಡು ಕಾಯಲಿ ನಾನು ವೀಣೆಯಾದೆಮೂರು ಕಾಯಲಿ ನಾನು ಮುದ್ದು ಕಿನ್ನರಿಯಾದೆನೀಟಾದ ಕಾಯಲಿ ನಾನು ನಾಗಸ್ವರವಾದೆ 1
ದಪ್ಪ ದಪ್ಪ ಕಾಯಲಿ ದರವೇಶಿಗಳಿಗಾದೆಮಿಕ್ಕ ಕಾಯಲಿ ನಾನು ಸನ್ನೇಸಿಗಳಿಗಾದೆಕೈತಪ್ಪಿ ಬಿದ್ದರೆ ಕದಿರಿಗೆ ಬಿಲ್ಲಾದೆಮತ್ತೆ ದೇವರ ಗುಡಿಗೆ ದೀಪವೇ ನಾನಾದೆ 2
ಚಿಕ್ಕಂದು ಮೊದಲು ನಾ ಸಾಸೂವೆ ಕಾಯಾದೆಚಿಕ್ಕ ಚಿನ್ಮಯಗೆ ಬುರುಡೆಯಾದೆಉಕ್ಕುವಾ ಹೊಳೆಯಲ್ಲಿ ತೆಪ್ಪವೇ ನಾನಾದೆಚೊಕ್ಕ ಕನಕಪ್ಪನ ಹಿಂದೆ ನಾ ತಿರುಪತಿಗೆ ಬಂದೆ3
***
No comments:
Post a Comment