..
ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ ಪ
ಸತ್ತವನು ಎತ್ತ ಪೋದಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದುನಿತ್ಯ ಪಿಂಡವಿಕ್ಕುತೀರಿ1
ಎಳ್ಳು ದರ್ಭೆ ಕೈಲಿ ಪಿಡಿದುಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತುದರ್ಭೆ ನೀರೊಳು ಹರಿದು ಹೋಯಿತು 2
ಎಡಕೆ ಒಂದು ಬಲಕೆ ಒಂದುಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿಕಟಿಯ ಹಸ್ತದೊಳಗೆ ಪಿಡಿಸುತೀರಿ 3
ಮಂತ್ರಾಕ್ಷತೆಯ ಕೈಗೆ ಕೊಟ್ಟುಮೋಕ್ಷವನ್ನು ಹಾರೈಸುವಿರಿಮಂತ್ರವೆಲ್ಲೊ ಅಕ್ಷತೆಯೆಲ್ಲೊಮೋಕ್ಷವೆಲ್ಲೊ ಮತ್ರ್ಯವೆಲ್ಲೊ4
ಹೇಳುವವನು ಅವಿವೇಕಿಕೇಳುವವನು ಅಜ್ಞಾನಿಹೇಳುವ ಕೇಳುವ ಇಬ್ಬರ ಸೊಲ್ಲಆದಿಕೇಶವಮೂರ್ತಿ ಬಲ್ಲ5
***
No comments:
Post a Comment