Wednesday, 1 September 2021

ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ankita neleyadikeshava

 ..

ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ


ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1


ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2


ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3

***


No comments:

Post a Comment