..
ನಿನ್ನ ಮಹಿಮೆಗಿಂಥವರು ಹೊಣೆಯೆ ? ಪ
ಚಿನ್ಮಯನೆ ಸಕಲಭುವನಾಧಾರವೆಂಬುದನುಬಣ್ಣಿಸಲು ಎನ್ನಳವೆ ಪನ್ನಗೇಂದ್ರನು ಹೊಣೆಯೆ ? ಅ
ಹರಿ ನಿನ್ನ ಪಾದವು ಪವಿತ್ರತರವೆಂಬುದಕೆಧರಣಿ ಬಲಿ ವಿಧಿ ಭವಾಹ್ಲಾದ ಹೊಣೆಯೊಹರಿಯು ನೀನೆಂಬುದಕೆ ಸರಿಯು ಕೌಸ್ತುಭ ರತ್ನವರ ಪೀತ ವಸನ ಕ್ಷೀರಾಬ್ಧಿ ಹೊಣೆಯೊಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯುಕರಿರಾಜ ಶಂಭು ಅಂಬರೀಷ ಹೊಣೆಯೊಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯಮರುತಸುತ ಸಾಂಧೀಪ ಹೊಣೆಯೊ ಕೃಷ್ಣ 1
ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವಫಲುಗುಣನು ವಿದುರ ಅಕ್ರೂರ ಹೊಣೆಯೊಛಲದಂಕನೆಂಬುದಕೆ ಬಾಣನು ಹಿರಣ್ಯಕನುಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ 2
ಏಕೋದೇವನದ್ವಿತೀಯ ಬ್ರಹ್ಮ ನೀನೆಂಬುದಕೆಏಕಾರ್ಣವದಲಿದ್ದ ವಟಪತ್ರ ಹೊಣೆಯೊಲೋಕೇಶ ಸರ್ವಂ ವಿಷ್ಣುಮಯಂ ಜಗತ್ತೆಂಬುದಕೆವಾಕೇಶ ವಾತ ಸತ್ತ್ವಗುಣ ಹೊಣೆಯೊಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆನಾಕೇಶಜಿತನ ಪಿತನನುಜ ಹೊಣೆಯೊಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ 3
***
ನಿನ್ನ ಮಹಿಮೆಗಿಂಥವರು ಹೊಣೆಯೆ? ಚಿನ್ಮಯನೆ ಸಕಲಭುವನಾಧಾರವೆಂಬುದನು
ಬಣ್ಣಿಸಲು ಎನ್ನಳವೆ|
ಪನ್ನಗೇಂದ್ರನು ಹೊಣೆಯೆ
ಹರಿ ನಿನ್ನ ಪಾದವು ಪವಿತ್ರತರವೆಂಬುದಕೆ |
ಧರಣಿ ಬಲಿ ವಿಧಿ ಭವಾಹ್ಲಾದ ಹೊಣೆಯೊ |
ಹರಿಯು ನೀನೆಂಬುದಕೆ ಸರಿಯು ಕೌಸ್ತುಭ ರತ್ನ
ವರಪೀತ ವಸನ ಕ್ಷೀರಾಬ್ಧಿ ಹೊಣೆಯೊ |
ಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯು
ಕರಿರಾಜ ಶಂಭು ಅಂಬರೀಷ ಹೊಣೆಯೊ |
ಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯ
ಮರುತಸುತ ಸಾಂದೀಪ ಹೊಣೆಯೊ ಕೃಷ್ಣ ||1||
ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವ
ಫಲುಗುಣನು ವಿದುರ ಅಕ್ರೂರ ಹೊಣೆಯೊ |
ಛಲದಂಕನೆಂಬುದಕೆ ಬಾಣನು ಹಿರಣ್ಯಕನು
ಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊ |
ಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆ
ಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊ |
ನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆ
ಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ ||2||
ಏಕೋದೇವನದ್ವಿತೀಯ ಬ್ರಹ್ಮ ನೀನೆಂಬುದಕೆ
ಏಕಾರ್ಣವದಲಿದ್ದ ವಟಪತ್ರ ಹೊಣೆಯೊ |
ಲೋಕೇಶ ಸರ್ವಂ ವಿಷ್ಣುಮಯಂ ಜಗತ್ತೆಂಬುದಕೆ
ವಾಕೇಶ ವಾತ ಸತ್ತ್ವಗುಣ ಹೊಣೆಯೊ |
ಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆ
ನಾಕೇಶಜಿತನ ಪಿತನನುಜ ಹೊಣೆಯೊ |
ಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತ
ಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ ||3||
***
No comments:
Post a Comment