Wednesday, 1 September 2021

ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಕಳ್ಳರಿಗೆ ಕಳ್ಳನಂತೆ ankita neleyadikeshava

 ..

ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಪ


ಕಳ್ಳರಿಗೆ ಕಳ್ಳನಂತೆ - ಬೆಳ್ಳಕ್ಕಿಯಂದದಿ ಡಂಭ ಅ


ಗಾಣದೆತ್ತಿನಂತೆ ಕಣ್ಣಮುಚ್ಚಿ ಪ್ರದಕ್ಷಿಣೆಯ ಮಾಡಿಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನುಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ1


ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡುಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯಾ 2


ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆಹೊಕ್ಕುಳ ಹೂವಿನ ಬಾಡದಾದಿಕೇಶವನ ಮೊರೆಹೊಕ್ಕೆನಿಂದು ಮನ್ನಿಸಿ ಕಾಯೋ ದೇವದೇವೋತ್ತಮನೆ 3

***


No comments:

Post a Comment