..
ಆತನೇ ಪರಮಾತ್ಮ ಪರತತ್ತ್ವ ಪ್ರಣವನೆಂ-ದರಿತು ಪೂಜಿಸಬಾರದೆಆತನಾ ಪದತೋಯ ಶಿರಸಾ ವಹಿಸಿ ಪಾನ-ದಿಂದಧಿಕರಾದರು - ಜೀವಿಗಳು ಮನುಜ ಪ
ದಾನಮುಖದಲಿ ಬಲಿಯ ಬೇಡಿ ಭುವನವನೊಂದುಪದದಿ ಅಳೆದವನಾವನುಮಾನದಾನವನ ನಾಲ್ಮೈಯ ಮುಡಿಗಟ್ಟಿವನಮಾನ ಉಳುಹಿದನಾವನುಮಾನ ಮರುಳಾದವನ ಮರ್ದಿಸಿದ ಬ್ರಹ್ಮಹತ್ಯೆಮಹಿಗೆ ಇಳುಹಿದನಾವನುಭಾನು ಮೊದಲಾದಖಿಳ ಬ್ರಹ್ಮಾಂಡಗಳಿಗೊಂದುಪಾದ ಹೊದಿಸಿದನಾವನು ? 1
ಕೊಟ್ಟ ವರಗಳನೆಲ್ಲ ಕೊಡಹಿ ಬಹು ದನುಜರನುಕುಟ್ಟಿ ಹಾಕಿದನಾವನುದಿಟ್ಟವರ ಕಾಲಾಂಣ(?) ಕಟ್ಟಿ ಮುನಿ ದೈವಗಳ ಪಟ್ಟದರಸು ಅದಾವನುಬೆಟ್ಟದಾತ್ಮಜೆ ಬೆನಕ ಪೆಸರ್ಗೊಂಡು ತನ ನಾಮಗುಟ್ಟಿನಲಿ ನೆನೆಸಿದುದಾವನುಗಟ್ಟಿಯಾಗಿ ಮುನಿಪೆಣ್ಗೆ ಕೊಟ್ಟಿದ್ದ ಶಾಪವನುಬಿಟ್ಟೋಡಿಸಿದನಾವನು ? 2
ವೇದಮುಖದವನ ಅತಿ ಮೋದದಲಿ ಪುಟ್ಟಿಸಿದಆದಿಮೂರುತಿ ಆವನುನಾದದಲಿ ಅಖಿಳ ಮಹಿ ನಟಿಸುವ ಮಹಾತ್ಮಕನಾದ ಸಾತ್ತ್ವಿಕನಾವನುಆದಿಯಲಿ ಜಗಗಳಿರದಂದು ವಟಪತ್ರಶಯನನಾದ ಮೂಲವದಾವನುಆದಿಕೇಶವ ದೈವವಲ್ಲದಿನ್ನಿಲ್ಲವೆಂದುಆಗಮವು ನುಡಿವುದಾವನನು ? 3
***
No comments:
Post a Comment