Wednesday, 1 September 2021

ಆವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ankita neleyadikeshava

 ..

ಆ ವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ಪ


ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆಶರಣನನು ಪಾಲಿಸುತೆ ಕಾಯ್ದೆಯಂತೆಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದುಕರುಣದಿಂದಲಿ ಕಾಯ್ದೆಯಂತೆ ಹರಿಯೆ 1


ಧರೆಗಧಿಕನಾಥನಾ ತೊಡೆಯನೇರಲು ಕಂಡುಜರೆಯಲಾ ಧ್ರುವನ ನೀ ಕಾಯ್ದೆಯಂತೆದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ 2


ಅಂದು ರಾವಣ ವಿಭೀಷಣನ ನೂಕಲು ಕಂಡುಇಂದಿರಾರಮಣ ನೀ ಕಾಯ್ದೆಯಂತೆಮಂದರೋದ್ಧರ ಮಧುಸೂದನ ಮಾಧವ ಗೋ-ವಿಂದ ರಕ್ಷಿಸು ಬಾಡದಾದಿಕೇಶವರಾಯ 3

***


No comments:

Post a Comment