ಅಸೂರಿ ರಾಮಸ್ವಾಮಿ ಅಯ್ಯಂಗಾರ್ ankita ramadasa
ಆತ್ಮನಿವೇದನಾಸ್ತುತಿಗಳು ಸನ್ನುತ ವನಜಭವಾನುತ ಪ
ಮುನಿಜನವಂದಿತ ಅನಘ ವಿರಾಜಿತ ಅ.ಪ ಭಕುತಿಯಲ್ಲವೆ ಜೀಯ ಮುಕುತಿಗೊಂಡಿಹನಯ್ಯ ವಿಕಳನಾ ಮುನಿಗೇಯ ಸುಕವಿಪೂಜಿತಕಾಯ 1
ಮರೆಯಬೇಡವೋ ಯನ್ನ ಗರುಡಗಮನ ನಿನ್ನ ಚರಣ ಸೇವಕರನ್ನ ನಿರುತನೆನೆವೆ ಮುನ್ನ 2
ನಡುಗಡಲಿನೊಳಿಹೆ ತಡಬಡಿಸುತಲಿಹೆ ಪಿಡಿಯಲು ತೃಣವಿಲ್ಲ ನುಡಿವರು ಗತಿಯಿಲ್ಲ 3
ತಾಮಸನಯ್ಯ ಬೇಡ ನೀ ಮನಸೋಲಬೇಡ ಪಾಮರ ವರದನೆ | ರಾಮದಾಸಾರ್ಚಿತನೆ4
ಮಾಂಗಿರಿವರವಾಸ ರಂಗನಾಥನೆ ಶ್ರೀಶಾ ಹಿಂಗದೆ ಯನ್ನಂತರಂಗದೆ ನಿಲೊ ಈಶಾ 5
***
No comments:
Post a Comment