Wednesday, 1 September 2021

ಎಂತು ಮರೆಯಬಹುದು ನಿಮ್ಮ ಹೇಳು ಗುರುರಾಯ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಎಂತು ಮರೆಯಬಹುದು ನಿಮ್ಮ ಹೇಳು ಗುರುರಾಯ | ಅಂತರಂಗದೀ ನೆನೆದು ಪಡೆಯಬೇಕು ಸುಖಾಶ್ರಯಾ ಪ 


ತಂದೆ ನೀನೇ ತಾಯಿ ನೀನೇ ಬಂಧು ಬಳಗ ನೀನೇ | ಹೊಂದಿ ಹರುಷಬಡುವಗತಿಯ ಗುರು ದೈವ ನೀನೇ 1 

ತಂದು ಜಠರದಲ್ಲಿ ಜನುಮ ಉಣಿಸಿ ಉಡಿಸಿ ಬೆಳೆಸೀ | ಛಂದದಿಂದಲಿ ಹೊರೆವೆಯಿನ್ನು ಬೇಡಿದನು ಸಲಿಸಿ 2 

ಮರೆಯಲಿಕ್ಕೆ ದೇಶಗ್ರಾಮ ವೃತ್ತಿಗೃಹಗಳಲ್ಲಾ | ಕಾಯ ಸುಖದ ದ್ರವ್ಯ ಧನವಲ್ಲಾ3 

ಮರಹು ಮರಸಿ ಅರವ್ಹಿಲಿರಿಸಿ ಇರಹು ಘನವನರಸಿ | ಗುರು ಮಹಿಪತಿ ಸ್ವಾಮಿ ಕಾಯಿದೇ ಕಂದನುದ್ಧರಿಸಿ4

***


No comments:

Post a Comment