...
kruti by ಲಕ್ಷ್ಮೀನಾರಯಣರಾಯರು Lakshminarayanaru
ಅಚ್ಚರಿಯೊಳಚ್ಚರಿಯು ಅಚ್ಯುತನ ನಾಮವಿದು
ತುಚ್ಛ ಬುದ್ಧಿಯ ಬಿಟ್ಟು ಎಚ್ಚೆತ್ತು ನೋಡೊ ಪ
ನಿಧಿಯು ತನ್ನೆದುರಿಗಿರೆ ವದರಿ ದುರ್ಯೋಧನನು
ಮದಡನಾದನು ಬರಿದೆ ದಳವ ಕೊಂಡು
ಸದಮಲಾತ್ಮನ ದಿವ್ಯ ಪದವನರ್ಜುನ ಪಿಡಿದು
ಮುದದಿ ಭಾಗ್ಯವ ಪಡೆದನದ್ಭುತವ ನೋಡ 1
ಹರಿಯ ಯೋಗದ ಸಿರಿಯು ಇರುವ ನಿಜವರಿಯದೆ
ಕುರುಡನಣುಗನು ಜರಿದು ಹಾಳಾದನು
ಉರುತರದ ಭಕ್ತಿಯಿಂದೆರಗಿ ಕರಗಳ ಮುಗಿದು
ನರ ತನ್ನ ಹೆಸರನ್ನು ಸಾರ್ಥಕವಗೈದ 2
ನೀಚಯುಕ್ತಿಗಳಿಂದ ಗೋಚರಕೆ ಬಹನಲ್ಲ
ವಾಚಾಮಗೋಚರನು ಶ್ರೀಕಾಂತನು
ಕೀಚಕಾರಿ ಪ್ರಿಯನ ಶ್ರೀ ಚರಣ ಭಕ್ತಿ ಭವ-ಮೋಚನಕೆ ಸೂಚನೆಯು ಆಚರಿಸಿ ನೋಡೋ 3
***