Showing posts with label ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು neleyadikeshava. Show all posts
Showing posts with label ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು neleyadikeshava. Show all posts

Wednesday, 1 September 2021

ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ankita neleyadikeshava

 ..  

ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ಪ


ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ - ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು1


ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗಜ್ಞಾತ ವಾಸವೇ ಲೇಸು2


ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು 3

***