by ಪಾವಂಜೆ ಶ್ರೀ ಲಕ್ಷ್ಮೀ ನಾರಾಯಣ ಆಚಾರ್ಯರು
ankita lakshuminarayana
ಅನುದಿನ ನಿನ್ನ ನೆನೆದು
ಮನವು ನಿನ್ನಲಿ ನಿಲ್ಲಲಿ.ಪ.
ದುಃಖ ಸುಖ ಲೆಕ್ಕಿಸದೆ ಮುಖ್ಯ ಫಲ ಮುಂದರಿಸೆ
ಮಿಕ್ಕುತ್ತ ಸೊಕ್ಕಿ ಮೋಹಕ್ಕೆ ಸಿಕ್ಕದೆ 1
ನಿನ್ನ ಗುಣ ವರ್ಣಿಸುತ ನಿನ್ನವರ ಮನ್ನಿಸುತ
ನಿನ್ನ ಪಾವನ್ನ ಲಾವಣ್ಯ ಧ್ಯಾನಿಸೆ 2
ಸಂತೋಷ ನಿರಂತರವು ಸಂತ ಜನ ಸಹವಾಸವು
ಶಾಂತತ್ವವಾಂತು ಮಹಾಂತಧೈರ್ಯದಿ3
ಭಕ್ತಿ ಸುವಿರಕ್ತಿ ಜ್ಞಾನ ಮುಕ್ತಿಗೆ ಮುಖ್ಯ ಕಾರಣ
ಚಿತ್ತದೊಳಿತ್ತೆಲ್ಲ ಹೊತ್ತು ಹೊತ್ತಿಗೆ4
ಪ್ರಿಯ ಶ್ರೀಲಕ್ಷುಮಿನಾರಾಯಣ ಪರಾಯಣನ
ಧೈರ್ಯದಂತರ್ಯ ಗಾಂಭೀರ್ಯ ಭಾವದಿ5
****
ಅನುದಿನ ನಿನ್ನ ನೆನೆದು
ಮನವು ನಿನ್ನಲಿ ನಿಲ್ಲಲಿ.ಪ.
ದುಃಖ ಸುಖ ಲೆಕ್ಕಿಸದೆ ಮುಖ್ಯ ಫಲ ಮುಂದರಿಸೆ
ಮಿಕ್ಕುತ್ತ ಸೊಕ್ಕಿ ಮೋಹಕ್ಕೆ ಸಿಕ್ಕದೆ 1
ನಿನ್ನ ಗುಣ ವರ್ಣಿಸುತ ನಿನ್ನವರ ಮನ್ನಿಸುತ
ನಿನ್ನ ಪಾವನ್ನ ಲಾವಣ್ಯ ಧ್ಯಾನಿಸೆ 2
ಸಂತೋಷ ನಿರಂತರವು ಸಂತ ಜನ ಸಹವಾಸವು
ಶಾಂತತ್ವವಾಂತು ಮಹಾಂತಧೈರ್ಯದಿ3
ಭಕ್ತಿ ಸುವಿರಕ್ತಿ ಜ್ಞಾನ ಮುಕ್ತಿಗೆ ಮುಖ್ಯ ಕಾರಣ
ಚಿತ್ತದೊಳಿತ್ತೆಲ್ಲ ಹೊತ್ತು ಹೊತ್ತಿಗೆ4
ಪ್ರಿಯ ಶ್ರೀಲಕ್ಷುಮಿನಾರಾಯಣ ಪರಾಯಣನ
ಧೈರ್ಯದಂತರ್ಯ ಗಾಂಭೀರ್ಯ ಭಾವದಿ5
****
ankita lakshuminarayana
doubt-check whether ತುಪಾಕಿ ವೆಂಕಟರಮಣಾಚಾರ್ಯ
by ಪಾವಂಜೆ ಶ್ರೀ ಲಕ್ಷ್ಮೀ ನಾರಾಯಣ ಆಚಾರ್ಯರು