Showing posts with label ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ neleyadikeshava. Show all posts
Showing posts with label ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ neleyadikeshava. Show all posts

Wednesday 1 September 2021

ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ ankita neleyadikeshava

 ..

ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ ಪ


ಸಿರಿದೇವಿಯು ಕಿರುಬೆರಳಲ್ಲಿರುವ ಸೊಬಗನ್ನುಅರಿಯಲಾರಳೊ ದೇವಅ


ಇಂದಿರಾದೇವಿಯು ಅರಿಯಲಾರಳು ದೇವಬೃಂದಾರಕರೆಲ್ಲ ನಿಂದು ಯೋಚಿಪರುನಂದತೀರ್ಥರ ಮತದೊಳಗೆ ಬಂದವರೆಲ್ಲಎಂದಿಗಾದರು ಪರಮಾನಂದ ಪೊಂದುವರು1


ಮಾನವರು ಹೀನಮಾರ್ಗದೊಳು ಮುಳುಗಿಹರುಜ್ಞಾನಿಗಳು ನಿಂದು ಧ್ಯಾನಿಪರು ನಿನ್ನನೀನೆ ದಯಮಾಡಿ ಸಲಹೊ ಎನ್ನನು ಕೃಷ್ಣಕಾನನದೊಳು ಕಣ್ಣುಮುಚ್ಚಿ ಬಿಟ್ಟಿಹರೊ 2


ಜಲದೊಳಗಿನ ಕಪ್ಪೆ ಜಲದ ಸವಿಯರಿಯದುಜಲದ ಸುಗಂಧವ ಜಲವರಿಯದುನೆಲೆಯ ಕಂಡವರ್ಯಾರು ನೆಲೆಯಾದಿಕೇಶವನೆಸುಲಲಿತ ತತ್ತ್ವವನು ಸುಲಭ ಮಾರ್ಗದಿ ತೋರೊ 3

***