..
ರಾಗ - : ತಾಳ -
ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ll ಪ ll
ಆನೆ ಬರುತಾದೆ ಎಲ್ಲರು ನೋಡಿರಿ ಒಂ
ದಾನೆಯ ಕೊಂದ ಮದ್ದಾನೆ
ಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿ
ತಾನೇ ತಾನಾಗಿ ಮದ ಸೊಕ್ಕಿದಾನೆ ll ಅ ಪ ll
ನೀರ ಮುಳುಗಿ ಖಳನ ಕೊಂದು ವೇದ ತಂದು
ಬರಮದೇವನಿಗಿತ್ತ ಮದ್ದಾನೆ
ಕ್ರೂರ ಚಿತ್ರಗುಪ್ತನೊಡನೆ ಕಾರುಬಾರಗಿಳಿದ
ಜಾರ ಕೃಷ್ಣನೆಂಬ ಸೊಕ್ಕಿದಾನೆ ll ೧ ll
ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆ
ಕುಸುಮಶರನ ಪೆತ್ತ ಮದ್ದಾನೆ
ದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದ
ದಶರಥಸುತನೆಂಬ ಮದ ಸೊಕ್ಕಿದಾನೆ ll ೨ ll
ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟು
ಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮ
ಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನ
ಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ ll ೩ ll
ಸಾವಿರ ತೋಳವನ ಸರಸದಿಂದಲಿ ಕಡಿದ
ಭುವನ ರಕ್ಷಕನಾದ ಮದ್ದಾನೆ
ಯೌವನದ ಗೋಪಿಯರ ಕಣ್ಮಣಿ ಎನಿಪ ವಸು
ದೇವಸುತನೆಂಬ ಮದ ಸೊಕ್ಕಿದಾನೆ ll ೪ ll
ಗರುಡವಾಹನವೇರಿ ಧಿಮಿಕೆಂದು ಬರುತಾನೆ
ಸರುವ ಲೋಕರಕ್ಷಕನೆಂಬ ಮದ್ದಾನೆ ಅ
ಸುರೆ ಪೂತನಿಯ ಹೀರಿ ಮಾವ ಕಂಸನ ಕೊಂದ
ಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ ll ೫ ll
***
ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ
ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ
ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1
ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2
ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3
ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4
ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
***