Showing posts with label ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು helavana katte. Show all posts
Showing posts with label ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು helavana katte. Show all posts

Tuesday, 1 June 2021

ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು ankita helavana katte

 ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು ವಿಧಿಬರಹವು ಪ.


ಪೊಡವಿಭಾರವ ಪೊತ್ತು ಮೃಡಗೆ ಭೂಷಣನಾಗಿ

ಹೆಡೆಯಲ್ಲಿ ಮಾಣಿಕವಯಿಟ್ಟುಕೊಂಡು

ಬಿಡದೆ ಶ್ರೀಹರಿಗೆ ಹಾಸಿಗೆ ಆದ ಫಣಿಪಂಗೆ

ಅಡವಿಯೊಳಗಣ ಹುತ್ತ ಮನಿಯಾಯಿತೈಯ್ಯಾ 1


ಸುರಪತಿಯಗೆದ್ದು ಸುಧೆಯನೆ ತಂದು ಮತ್ತೆ ಮಾತೆಯ

ಸೆರೆಯ ಪರಿಹರಿಸಿ ಬಹುಶಕ್ತನೆನಿಸಿಕೊಂಡ

ಹದಿನಾಲ್ಕು ಲೋಕನಾಳುವವನ ಹೊತ್ತು

ಇರುವವಗಾಯಿತು ಮನೆಯು ಮರದ ಮೇಲೆ 2


ರಾಮಚಂದ್ರನ ಸೇವೆಮಾಡಿ ಮೆಚ್ಚಿಸಿಕೊಂಡು

ರಾವಣನ ಗರ್ವಮುರಿದು ಬಂದೂ

ರೋಮರೋಮಕೆ ಕೋಟಿಲಿಂಗಧರಿಸಿದ

ಹನುಮಂತಗೆ ಗ್ರಾಮಗಳ ಕಾಯ್ವದಾಯಿತೈಯ್ಯಾ 3


ಮೂರ್ಲೋಕಕಾಧೀಶ ಮುಕ್ಕಣ್ಣ ಶಿವನೆಂದು

ಸಾರುತಿದೆ ವೇದ ಸಟೆಯಲ್ಲವಿದು

ಪಾರ್ವತಿಗೆ ಪತಿಯಾದ ಕೈಲಾಸವಾಸನಿಗೆ

ಊರಹೊರಗಣ ಕಾಡ ಕಾಯ್ವದಾಯಿತೈಯ್ಯಾ 4


ಮೀರಲಳವಲ್ಲಾ ಮುನ್ನಿನಾ ಕರ್ಮವನು

ಕಾರಣಕರ್ತನಿಗಲ್ಲದೆ

ಮಾರಪಿತ ಹೆಳವನಾಕಟ್ಟೆರಂಗೈಯ್ಯನ

ಸೇರದ ಕಾಲವ್ಯರ್ಥವ್ಯಾದಿತೈಯ್ಯಾ 5

***