Showing posts with label ಆರಿಗಾರಿಲ್ಲ ಆಪತ್ಕಾಲದೊಳಗೆ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ neleyadikeshava. Show all posts
Showing posts with label ಆರಿಗಾರಿಲ್ಲ ಆಪತ್ಕಾಲದೊಳಗೆ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ neleyadikeshava. Show all posts

Wednesday, 1 September 2021

ಆರಿಗಾರಿಲ್ಲ ಆಪತ್ಕಾಲದೊಳಗೆ ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ankita neleyadikeshava

 ..

ಆರಿಗಾರಿಲ್ಲ ಆಪತ್ಕಾಲದೊಳಗೆ ಪ


ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ ಅ


ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗಅಸಮಾನನಾದಾಗ ಅತಿ ಭೀತಿಗೊಂಡಾಗಬಿಸಜನಾಭನ ನಾಮ ನೆನೆಕಂಡ್ಯ ಮನವೆ 1


ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪಘಳುಘುಳಿಸುತ ಕೋಪವನು ತೋರಿದಾಗಮೇಲು ತಾನರಿಯದಯೆ ನಿಂದೆ ಹೊಂದಿರುವಾಗನೀಲಮೇಘಶ್ಯಾಮನ ನೆನೆಕಂಡ್ಯ ಮನವೆ 2


ಪಂಥದಲಿರುವಾಗ ಪದವಿ ತಪ್ಪಿರುವಾಗದಂತಿಮದವೇರಿ ಬೆನ್ನತ್ತಿದಾಗಕಂತುಪಿತ ಕಾಗಿನೆಲೆಯಾದಿಕೇಶವನ ನಿ-ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ 3

***