ರಾಗ : ಕಾಂಬೋದಿ ತಾಳ : ಝಂಪೆ
ಆರು ಬಲ್ಲರು ಹರಿ ಹರರ ಮಹಿಮೆಯನು
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ।।ಪ॥
ಪೌರತ್ರಯವ ಗೆಲುವ ಸಮಯದಲಿ ತಪವಮಾಡಿ
ನಾರಾಯಣಾಸ್ತ್ರವನು ಪಡೆದನೀತ
ಗೌರಿಮನೋಹರನ ಘನತರಾರ್ಚನೆಗೈದು
ಚಾರುತರ ಚಕ್ರವನು ಪಡೆದನಾ ಶೌರಿ ।।೧।।
ಬಲಿ ಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ
ಗಿಲಕಾಯ್ದನಚ್ಯುತನು ಅನುಗಾಲದಿ
ಬಲಭುಜನು ಬಾಣಾಸುರನ ಗೃಹದ್ವಾರವನು
ಬಳಸಿ ಕಾಯ್ದನು ಹರನು ವರವ ತಾನಿತ್ತು ।।೨।।
ಭೋಗಿಶಯನನು ಆಗಿ ಭೋಗಿಭೂಷಣನಾಗಿ
ವಾಗೀಶನಾಗಿ ಸೃಷ್ಟಿ ಸ್ಥಿತಿ ಲಯಗಳಿಂಗೆ
ಆಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ
ಕಾಗಿನೆಲೆಯಾದಿಕೇಶವನ ಮಹಿಮೆಯನು ।।೩।।
***
ಆರು ಬಲ್ಲರು ಹರಿ ಹರರ ಮಹಿಮೆಯನು
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ।।ಪ॥
ಪೌರತ್ರಯವ ಗೆಲುವ ಸಮಯದಲಿ ತಪವಮಾಡಿ
ನಾರಾಯಣಾಸ್ತ್ರವನು ಪಡೆದನೀಶ||
ಗೌರಿಮನೋಹರನ ಘನತರಾರ್ಚನೆಗೈದು
ಚಾರುತರ ಚಕ್ರವನು ಪಡೆದನಾ ಶೌರಿ ।।೧।।
ಬಲಿ ಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ
ಬಾಗಿಲಕಾಯ್ದನಚ್ಯುತನು ಅನುಗಾಲದಿ |
ಬಲಭುಜನ ಬಾಣಾಸುರನ ಗೃಹದ್ವಾರವನು
ಬಳಸಿ ಕಾಯ್ದನು ಹರನು ವರವ ತಾನಿತ್ತು ।।೨।।
ಭೋಗಿಶಯನನು ಆಗಿ ಭೋಗಿಭೂಷಣನಾಗಿ
ವಾಗೀಶನಾಗಿ ಸೃಷ್ಟಿ ಸ್ಥಿತಿ ಲಯಗಳಿಂಗೆ |
ಆಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ
ಕಾಗಿನೆಲೆಯಾದಿಕೇಶವನ ಮಹಿಮೆಯನು ।।೩।|
***
Aru ballaru hari harara mahimeyanu
Varijodbava surendradigaligalavalla ||pa||
Pauratrayava geluva samayadali tapavamadi
Narayanastravanu padedanita
Gaurimanoharana ganatararcanegaidu
Carutara cakravanu padedana Sauri ||1||
Bali cakravarti Baktige mecci avana ba
Gilakaydanacyutanu anugaladi
Balabujanu banasurana gruhadvaravanu
Balasi kaydanu haranu varava tanittu ||2||
Bogisayananu Agi bogibushananagi
Vagisanagi srushti sthiti layagalimge
Agu karana karya karmadi rupakke
Kagineleyadikesavana mahimeyanu ||3||
***